- ಅಂಗನವಾಡಿ,. ಶಾಲೆಗಳು, ಕಾಲೇಜುಗಳಿಗೆ ರಜೆ
- ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಆದೇಶ
- ಸಾಗರ ತಾಲ್ಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ.
ಶಿವಮೊಗ್ಗ :ತೀರ್ಥಹಳ್ಳಿ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 18.08.2025 ರ ಸೋಮವಾರ ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ. ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ತೀರ್ಥಹಳ್ಳಿ ತಾಲ್ಲೂಕು ಆದೇಶ ಮಾಡಿದ್ದಾರೆ.
ಸಾಗರ ತಾಲ್ಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ
ಸಾಗರ ತಾಲ್ಲೂಕಿನಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ: 18-08-2025 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ ಹಾಗೂ ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಮಾನ್ಯ ಸಾಗರ ತಹಶೀಲ್ದಾರ್ ಶ್ರೀಮತಿ ರಶ್ಮಿರವರು ಆದೇಶಿಸಿದ್ದಾರೆ.
ವರದಿ :ಪ್ರಸಾದ್ ಹೆಚ್ ಬಿ ತೀರ್ಥಹಳ್ಳಿ.



















