ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಆಗಸ್ಟ್ 20 ಬುಧವಾರ ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆಯ ತೀವ್ರತೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಉಂಟಾಗಿದೆ. ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಇದೇ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವಂತೆ ಹಾಗೂ ಅನಾವಶ್ಯಕ ಪ್ರಯಾಣ ತಪ್ಪಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಜಿಲ್ಲೆಯಲ್ಲಿ ಮಳೆ ತೀವ್ರತೆ ಮುಂದುವರಿಯುವ ಸಾಧ್ಯತೆ ಇದ್ದು, ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ
ವರದಿ. :ವಿಠ್ಠಲ ಖೋಕಾಟೆ ಅಥಣಿ



















