ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆ.25ರಂದು ದಸರಾ ಮಟ್ಟದ ಕ್ರೀಡಾಕೂಟ: ಬೊಮ್ಮನಳ್ಳಿಕ‌ರ್

ಕಲಬುರಗಿ/ ಚಿತ್ತಾಪುರ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆ.25 ರಂದು ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್‌ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಸದರಿ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್‌, ಫುಟಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗಾ, ಪುರುಷ ಮತ್ತು ಮಹಿಳೆಯರಿಗೆ ಪುಟಬಾಲ್ ಪುರುಷರಿಗೆ ಮಾತ್ರ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ವ-ಇಚ್ಚೆಯಿಂದ ಭಾಗವಹಿಸಬಹುದಾಗಿರುತ್ತದೆ. ಕರ್ನಾಟಕದ ನಿವಾಸಿಗಳಾಗಿರಬೇಕು, ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಾಗಿರಬಾರದು, ಒಬ್ಬ ಕ್ರೀಡಾಪಟು ಅಥವಾ ತಂಡ ಒಂದು ಬಾರಿ ತಾಲೂಕು/ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಬೇರೆ ತಾಲೂಕು/ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತಿಲ್ಲ. ಈ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವೀತಿಯ ಗುಂಪು ಕ್ರೀಡೆಯಲ್ಲಿ ಪ್ರಥಮ ತಂಡಗಳು ಜಿಲ್ಲಾ ಮಟ್ಟಕ್ಕೆ ಅರ್ಹರಿರುತ್ತಾರೆ. ತೀರ್ಪುಗಾರರ ತಿರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಮರಿಯಪ್ಪ ತಾಲೂಕು ಕ್ರೀಡಾಂಗಣ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ 9945230160 ಯನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

  • ವರದಿ ಮೊಹಮ್ಮದ್ ಅಲಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!