ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಮ್ಮ ಬದುಕಿಗೆ ಬೇಕಿರುವ ವಿಚಾರಗಳನ್ನು ಆಲಿಸಿ, ಉತ್ತಮ ಬದುಕು ಕಟ್ಟಿಕೊಳ್ಳಿ : ಜೆ.ಚಂದ್ರಶೇಖರ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಗ್ರಾಮದ ವಿಜಯ ಮಹಾಂತೇಶ ವೀರಶೈವ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಲ್ಯಾಣ ಕರ್ನಟಕ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಆಧುನಿಕ ದಿನಮಾನದಲ್ಲಿ ಪೂಜೆ, ಪುನಸ್ಕಾರಗಳನ್ನು ಮಾಡಿಕೊಂಡು ಬಂದರೆ, ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಜೊತೆಗೆ ಇಷ್ಟಾರ್ಥಗಳು ಲಭಿಸಲಿವೆ. ನಿತ್ಯ ನಮ್ಮ ಸುತ್ತ ಹಲವಾರು ಘಟನೆಗಳು ಘಟಿಸುತ್ತಿರುತ್ತವೆ. ಅಂಥವುಗಳಲ್ಲಿ ಯಾವುದು ನಮಗೆ ಬೇಕು, ಬೇಡ ಎಂಬುದನ್ನು ನಿರ್ಧರಿಸಿ ಮುನ್ನಡೆಯಬೇಕು. ನಮ್ಮ ಬದುಕಿಗೆ ಬೇಕಿರುವ ವಿಚಾರಗಳಲ್ಲಿ ನಮ್ಮನ್ನು ನಾವು ಕೇಂದ್ರೀಕರಿಸಿಕೊಳ್ಳುವುದನ್ನು ಕಲಿಯಬೇಕು. ಆಗ ಮಾತ್ರ ನಾವು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಬಿ.ನಾರಾಯಣಪ್ಪ ಮಾತನಾಡಿ, ಯೋಜನೆ ಗ್ರಾಮೀಣ ಭಾಗದ ಮಹಿಳೆಯರ ಜೀವನಾಡಿಯಾಗಿ ಕೆಲಸ ಮಾಡುತ್ತಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಿದೆ. ಸಾಮೂಹಿಕವಾಗಿ ಧಾರ್ಮಿಕ ಆಚರಣೆಗಳನ್ನು ಆಚರಿಸಿ ದೇವರನ್ನು ಪ್ರಾರ್ಥಿಸಿದಾಗ ಯಶಸ್ಸು ಕಾಣುವುದರೊಂದಿಗೆ ಪರಸ್ಪರ ಅನೋನ್ಯತೆಯು ವೃದ್ಧಿಸುತ್ತದೆ ಎಂದರು.
ಪೂಜಾ ಸಮಿತಿ ಗೌರವಾಧ್ಯಕ್ಷ ಹೆಚ್.ಶಿವಶಂಕರಗೌಡ ಅಧ್ಯಕ್ಷತೆವಹಿಸಿದ್ದರು. ಬೆಳಿಗ್ಗೆ ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಶ್ರದ್ಧೆಯಿಂದ ನೆರವೇರಿದವು.
ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ಶಾಖಾ ಪ್ರಬಂಧಕ ಬಿ.ರವಿ, ಧರ್ಮಸ್ಥಳ ಟ್ರಸ್ಟ್ ನ ಜಿಲ್ಲಾ ನಿರ್ದೇಶಕ ರೋಹಿತಾಕ್ಷ, ಗ್ರಾಪಂ ಅಧ್ಯಕ್ಷೆ ಎಂ.ಆಶಾ, ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಎಲ್, ತಾಲೂಕು ಕೃಷಿ ಅಧಿಕಾರಿ ಸಂಜುಕುಮಾರ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೇಖಾ, ತಾಲೂಕು ವಿಚಕ್ಷಣಾಧಿಕಾರಿ ಶ್ರಿಶೈಲ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ, ಕೋಶಾಧಿಕಾರಿ ಪಿ.ಮುಕ್ಕಣ್ಣ, ಪೂಜಾ ಸಮಿತಿಯ ಉಪಾಧ್ಯಕ್ಷರಾದ ಹೆಚ್.ಜಗನ್ನಾಥಗೌಡ, ಟಿ.ಎಂ.ಸಾವಿತ್ರಮ್ಮ, ಎ.ಮಹೇಶ, ಡಿ.ಕೃಷ್ಣಪ್ಪ, ಹೆಚ್.ಲಿಂಗೇಶ, ಹೆಚ್.ಜಗದೀಶ ಪೂಜಾರಿ ಹಾಗೂ ಸಿದ್ದಯ್ಯಸ್ವಾಮಿ, ಪ್ರವೀಣ್ ಕುಮಾರ, ಹೆಚ್.ಚನ್ನಬಸಯ್ಯಸ್ವಾಮಿ ಸೇರಿದಂತೆ ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!