ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಿಡಮರಗಳ ರಕ್ಷಣೆಗಾಗಿ ವೃಕ್ಷ ಬಂಧನ ಆಚರಿಸಿ : ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ

ಗಿಡಮರಗಳಿಗೆ ರಾಖಿ ಕಟ್ಟುವ ಮೂಲಕ ಪ್ರತಿಯೊಬ್ಬರೂ ಗಿಡಮರಗಳ ರಕ್ಷಣೆ ಮಾಡಲು ಮುಂದಾಗಬೇಕು ಎಂದು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಸಿಂಧನೂರಿನ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಅವರು ಕರೆ ನೀಡಿದರು.

ಸಿಂಧನೂರು ನಗರದ PWD ಯ ಆದರ್ಶ ಮೊಂಟೋಸ್ಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವನಸಿರಿ ಪೌಂಡೇಷನ್ ವತಿಯಿಂದ ಗಿಡಗಳಿಗೆ ರಾಖಿ ಕಟ್ಟುವ ಮೂಲಕ ವೃಕ್ಷ ಬಂಧನ ಆಚರಣೆಯ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ವನಸಿರಿ ಫೌಂಡೇಶನ್‌ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಅವರು ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ. ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಈ – ದಿನ ಸಹೋದರಿಯರು ತಮ್ಮ ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು – ಕಟ್ಟಿ ಆರತಿ ಮಾಡಿ,ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭಾತೃತ್ವದ ಭಾವನೆಯನ್ನು ಗಟ್ಟಿಗೊಳಿಸುವ ಹಬ್ಬ ಇದಾಗಿದೆ. ಇಂತಹ ಒಂದು ಅಣ್ಣತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬವನ್ನು ನಮ್ಮ ವನಸಿರಿ ಫೌಂಡೇಶನ್ ವತಿಯಿಂದ ವಿನೂತನವಾಗಿ ಗಿಡಮರಗಳನ್ನ ಉಳಿಸಲು, ಅಣ್ಣತಂಗಿಯರಂತೆ ಗಿಡಮರಗಳ ರಕ್ಷಣೆ ಮಾಡಬೇಕು ಎಂಬ ಉದ್ದೇಶದಿಂದ ಗಿಡಮರಗಳ ರಕ್ಷಣೆಯ ಮಹತ್ವದ ಬಗ್ಗೆ ತಿಳಿಸಲು ಆಚರಿಸುತ್ತಿದ್ದೇವೆ. ಗಿಡಮರಗಳ ರಕ್ಷಣೆಯಿಂದ ಶುದ್ಧವಾದ ಗಾಳಿ ತೆಯಬಹುದು,ಮಣ್ಣಿನ ಸವಕಳಿಯನ್ನು ತಡೆಗಟ್ಟಬಹುದು.ಆದ್ದರಿಂದ ಗಿಡಮರಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ದಯವಿಟ್ಟು ನಿಮ್ಮ ಅಣ್ಣತಮ್ಮಂದಿರ ಹೆಸರಲ್ಲಿ ಗಿಡನೆಟ್ಟು ಪೂಜೆ ಸಲ್ಲಿಸಿ ಗಿಡಮರಗಳಿಗೆ ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನವನ್ನು ವೃಕ್ಷ ಬಂಧನವಾಗಿ ಆಚರಣೆ ಮಾಡಿ ಗಿಡಮರಗಳನ್ನು ರಕ್ಷಣೆ ಮಾಡಲು ಮುಂದಾಗಬೇಕೆಂದು “ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ ಅವರು ಕರೆ ನೀಡಿದರು.

ಈ ಸಂಧರ್ಭದಲ್ಲಿ ಶಾಲೆಯ ಅಧ್ಯಕ್ಷ ಚೆನ್ನಬಸ್ಸಪ್ಪ ಸಜ್ಜನ್, ಕಾರ್ಯದರ್ಶಿಗಳು ವಿರುಪಾಕ್ಷಿ ಗುಂಡೂರ, ಆದನಗೌಡ ಎಲೆಕೂಡ್ಲಿಗಿ, ಮಂಜುನಾಥ ಪಾಟೀಲ್, ರುದ್ರಗೌಡ, ದುರ್ಗೆಶ DSP, ರಾಜು ಪತ್ತಾರ,
ಮುಖ್ಯಗುರು ನಾವ್ಯರಾಣಿ
ಶಿಕ್ಷಕಿಯರು ಗೀತಾ ಗವಾಯಿ
ಯಮುನಮ್ಮ ಶಾಲೆಯ ವಿದ್ಯಾರ್ಥಿಗಳು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!