ಬಳ್ಳಾರಿ/ ಕಂಪ್ಲಿ :ಶ್ರೀಧರ್ಮಸ್ಥಳ ಕ್ಷೇತ್ರದ ಹೆಸರನ್ನು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲದಿಂದ ಪಟ್ಟಣದಲ್ಲಿ ಧರ್ಮ ರಕ್ಷಣೆಗಾಗಿ ಹೋರಾಟ ಎಂಬಂತೆ ಬೃಹತ್ ಪ್ರತಿಭಟನೆ ಶುಕ್ರವಾರ ನಡೆಸಲಾಯಿತು.
ಇಲ್ಲಿನ ಉದ್ಭವ ಗಣೇಶ ದೇವಸ್ಥಾನದಿಂದ ಧರ್ಮರಕ್ಷಣೆಯ ಘೋಷಣೆಗಳನ್ನು ಕೂಗುತ್ತಾ, ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಧಿಕ್ಕಾರಗಳನ್ನು ಹಾಕುತ್ತಾ ನಡುವ ಮಸೀದಿ, ಡಾ.ರಾಜಕುಮಾರ ಮುಖ್ಯರಸ್ತೆ, ಮಾರೆಮ್ಮ ಗುಡಿ, ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಿದರು.
ತದ ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ, ತಹಶೀಲ್ದಾರ್ ಜೂಗಲ್ ಮಂಜುನಾಯಕಗೆ ಮನವಿ ಪತ್ರ ಸಲ್ಲಿಸಿದರು.
ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಮಾತನಾಡಿ, ಧರ್ಮಸ್ಥಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಇಲ್ಲಿನ ಪಾವಿತ್ರ್ಯತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಕಾಣದ ಕೈಗಳು ಪಿತೂರಿ ಮಾಡಿವೆ. ಇದರಿಂದ ಕ್ಷೇತ್ರಕ್ಕೆ ಯಾವುದೇ ಕಪ್ಪುಚುಕ್ಕಿ ಬೀಳುವುದಿಲ್ಲ. ಧರ್ಮ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಲ್ಲಿನ ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮವಾಗಬೇಕಾಗಿದೆ. ನೂರಾರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ, ನಾಡಿನ ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಪವಿತ ಶ್ರೀಕೇತ ಧರ್ಮಸ್ಥಳದ ಕುರಿತು ಇತ್ತೀಚೆಗೆ ಕೆಲವು ದುಷ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕವಾಗಿ ನಿರಂತರವಾಗಿ ಸುಳ್ಳು ಸುದ್ದಿ ಮತ್ತು ಕಲಿತ ಆರೋಪಗಳನ್ನು, ಹರಡುತ್ತಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದೆ. ಈ ರೀತಿಯ ವ್ಯವಸ್ಥಿತ ಅಪಪ್ರಚಾರದಿಂದಾಗಿ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗುತ್ತಿದ್ದು, ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟಾಗಿದೆ. ಇದು ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡುವ ಪ್ರಯತ್ನವಾಗಿದೆ. ಧರ್ಮ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಈ ರೀತಿಯ ಕೃತ್ಯಗಳನ್ನು ಭಾರತೀಯ ಜನತಾ ಪಾರ್ಟಿಯು ತೀವ್ರವಾಗಿ ಖಂಡಿಸುತ್ತದೆ. ಆದ್ದರಿಂದ ಗಂಭೀರವಾಗಿ ಪರಿಗಣಿಸಿ, ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸುತ್ತಿರುವ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಕೂಡಲೇ ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಎಸ್. ಎಂ. ನಾಗರಾಜಸ್ವಾಮಿ, ಟಿ.ವಿ.ಸುದರ್ಶನರೆಡ್ಡಿ, ನಗರ ಘಟಕ ಅಧ್ಯಕ್ಷ ಮುರಳಿ ಮೋಹನ್ ರೆಡ್ಡಿ ಪ್ರಧಾನ ಕಾರ್ಯದರ್ಶಿಗಳು ಬಸವ ಪ್ರಭು ಕಟ್ಟೆ ವಿಶ್ವನಾಥ ಮುಖಂಡರಾದ ಬಿ.ದೇವೇಂದ್ರ, ಎಸ್. ಚಂದ್ರಶೇಖರಗೌಡ, ಗುರುರಾಜ, ನಾಗರಾಜ, ಬಡಿಗೇರ ವಿರೇಶ, ಬಿ.ಮಂಜುಳಾ, ಹುಲಿಗೆಮ್ಮ, ಯು.ಈರಮ್ಮ, ಲಕ್ಷ್ಮೀದೇವಿ, ಚಂದ್ರಮ್ಮ, ರೇಖಾ, ಸುಮಾ, ದಿವ್ಯಭಾರತಿ, ಹನುಮಂತಮ್ಮ, ಎನ್.ಮಂಜುಳಾ ಸೇರಿದಂತೆ ಅನೇಕರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















