ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದಲ್ಲಿ ಪುರಾಣ ಮಂಗಲೋತ್ಸವ, 90 ನೇ ತತ್ವ-ದಶ೯ನ ಮಾಸಿಕ ಕಾಯ೯ಕ್ರಮ

ಬಾಗಲಕೋಟೆ : ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆದು ಬಂದಿರುವ “ಶ್ರಾವಣ ಸಂಭ್ರಮ” 2025 “ಶರಣರ ಚರಿತ್ರಾಮೃತ” ಪುರಾಣವು ರವಿವಾರ ದಿ.24 ರಂದು ಮುಂಜಾನೆ ಸಮಯ 8.30 ಕ್ಕೆ ಸಮಾರೋಪ ಸಂಪನ್ನ ಕಾರ್ಯಕ್ರಮವು ಜರುಗಲಿದೆ ಎಂದು ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೆ ಸಂದರ್ಭ ದಲ್ಲಿ ಆಶ್ರಮದಲ್ಲಿ ನಿರಂತರವಾಗಿ ನಡೆಯುತ್ತಿರುವ ಮನೆಯಂಗಳದಲ್ಲಿ ಶರಣರ ಮನದ ಮಾತು, ತತ್ವದರ್ಶನ 90ನೇ ಮಾಸಿಕ ಕಾರ್ಯಕ್ರಮವು ಹಾಗೂ 111ನೇಯ ರವಿವಾರದ ಸತ್ಸಂಗವು ಜರುಗುವುದು. ಜಗದ್ಗುರು ಶ್ರೀ ಸಿದ್ಧಾರೂಢರ ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಪಾರಾಯಣ, ಭಜನೆ, ಪ್ರವಚನ, ಸಾಧಕರಿಗೆ ಸತ್ಕಾರ ಮುಂತಾದ ಕಾರ್ಯಕ್ರಮಗಳು ಪರಮಪೂಜ್ಯ ಶ್ರೀ ಶರಣಬಸವ ಶಾಸ್ತ್ರಿಗಳ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಗುರುಪ್ರಸಾದ್ ಸ್ವಾಮೀಜಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!