ಬಳ್ಳಾರಿ / ಕಂಪ್ಲಿ : ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ನಿಮಿತ್ಯ ಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ನಿಟ್ಟಿನಲ್ಲಿ ಪಟ್ಟಣದ ಪೊಲೀಸ್ ಅಡಿಷನಲ್ ಎಸ್ಪಿ ಎನ್ ನವೀನ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ಸೋಮವಾರ ಪಥಸಂಚಲನ ನಡೆಸಿದರು.
ಅಡಿಷನಲ್ ಎಸ್ ಪಿ ಎನ್ ನವೀನ್ ಕುಮಾರ್ ಮಾತನಾಡಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಗಲಾಟೆ ಗದ್ದಲಕ್ಕೆ ಅವಕಾಶ ನೀಡಬಾರದು ಸಂಜೆ ಮತ್ತು ರಾತ್ರಿ ನಿಗದಿಪಡಿಸಿದ ಸಮಯದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಮುಗಿಸಬೇಕು.ವೃದ್ಧರು, ರೋಗಿಗಳು ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಅಬ್ಬರದ ಧ್ವನಿವರ್ಧಕ ಮತ್ತು ಡಿ ಜೆ ಬಳಕೆ ನಿಷೇಧ ಮಾಡಲಾಗಿದೆ ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತ ರೀತಿಯಲ್ಲಿ ಮಾಡಬೇಕು ಎಂದು ತಿಳಿಸಿದರು.
ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದು ಸಾರ್ವಜನಿಕರ ಸಮಸ್ಯೆ ಆಲಿಸಿ ಅವುಗಳನ್ನು ಬಗೆಹರಿಸಲು ಪೊಲೀಸರು ಬದ್ಧರಾಗಿದ್ದಾರೆ ಎಂದು ತಿಳಿಸಿದ್ದು ಹಾಗಾಗಿ ನಿಬಂಧನೆಗಳಿಗೆ ಒಳಪಟ್ಟು ಮಾರ್ಗಸೂಚಿ ಪ್ರಕಾರ ಹಬ್ಬ ಆಚರಿಸಬೇಕೆಂದು ಮನವಿ ಮಾಡಿದರು.
ಪೊಲೀಸ್ ಠಾಣೆಯಿಂದ ಪ್ರಾರಂಭಗೊಂಡ ಪಥಸಂಚಲನ ಅಂಬೇಡ್ಕರ್ ಸರ್ಕಲ್, ನಡಲು ಮಸೀದಿ ಸರ್ಕಾರಿ ಆಸ್ಪತ್ರೆ ರಸ್ತೆ ಮುಖಾಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿ ಶಾಂತಿ ಸಂದೇಶ ಸಾರಿದರು. ಡಿ ವೈ ಎಸ್ ಪಿ ಪ್ರಸಾದ್ ಗೋಖಲೆ, ಸಿಪಿಐ ವಾಸು ಕುಮಾರ್, ಪಿಎಸ್ಐ ಅವಿನಾಶ್ ಕಾಂಬಳೆ ಕುರುಗೋಡು ಪಿಎಸ್ಐ ಸುಪ್ರೀತ್ ಸೇರಿದಂತೆ ಪೊಲೀಸರು ಹವಾಲ್ದಾರರು, ಪೊಲೀಸ್ ಪೇದೆಗಳು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















