ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉತ್ತಮ ಶಿಕ್ಷಣವನ್ನು ಪಡೆದು ಭವಿಷ್ಯದ ಮಾದರಿ ಪ್ರಜೆಗಳಾಗಿ : ಎಸ್.ರುದ್ರಮುನಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯ 1ನೇ ವಾರ್ಡಿನ ತುಂಗಭದ್ರ ನದಿ ಸೇತುವೆ ಬಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಲಿ ಶಾಸಕ ಜೆ.ಎನ್.ಗಣೇಶ ಅವರ ಆಪ್ತ ಸಹಾಯಕ ಧನರಾಜ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್, ಪೆನ್ನು, ಪೆನ್ಸಿಲ್ ವಿತರಿಸಿದರು. ನಂತರ ಯುವ ಮುಖಂಡ ಎಸ್.ರುದ್ರಮುನಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಜೊತೆಗೆ ಸಾಕಷ್ಟು ಸೌಲಭ್ಯಗಳು ದೊರಕಲಿವೆ. ಇಲ್ಲಿನ ಶಾಲೆಯಲ್ಲಿ ಶಿಕ್ಷಕ ವೃಂದದವರು ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸುತ್ತಿದ್ದಾರೆ. ಆದ್ದರಿಂದ ಪೋಷಕರು ಜೊತೆಗೆ ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಇಲ್ಲಿನ ಶಾಲೆಯಲ್ಲಿ 46 ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿತರಿಸಿದ್ದು, ಇದರ ಸದುಪಯೋಗದೊಂದಿಗೆ ಮಕ್ಕಳು ಶಿಕ್ಷಣವಂತರಾಗಬೇಕು. ಶಾಸಕರ ಆಪ್ತ ಸಹಾಯಕ ಧನರಾಜ್ ಇವರು ಸಮಾಜಮುಖಿ ಕಾರ್ಯ ಮಾಡುವ ಮೂಲಕ ಜನರೊಂದಿಗೆ ಒಳ್ಳೆಯ ಸಂಪರ್ಕ ಬೆಳೆಸಿಕೊಂಡಿದ್ದು, ಇನ್ನೂ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದರು. ಈ ಸಂದರ್ಭದಲ್ಲಿ ಮುಖ್ಯಗುರು ಹೊಸಗೇರಪ್ಪ, ಸಹ ಶಿಕ್ಷಕರಾದ ಚಂದ್ರಶೇಖರ್ ಶೆಟ್ರು, ಸುನೀತಾ, ಎಸ್.ಭವ್ಯ, ಯುವಕರಾದ ವಾಸುಕುಮಾರ, ಬಾಗ್ಲಿ ಮಕ್ಬುಲ್ ಸಾಬ್ ಮಲ್ಲಿಕಾರ್ಜುನ, ಗಜೇಂದ್ರ, ರಾಘವೇಂದ್ರ, ರವಿ ಸೇರಿದಂತೆ ಮಕ್ಕಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!