ಯಾದಗಿರಿ ತಾಲ್ಲೂಕಿನ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಹತ್ತಿರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯ ಸಮಸ್ಯೆ
ಯಾದಗಿರಿ: ಕಳೆದ ಒಂದು ವಾರದಿಂದ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಸಮೀಪದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಈ ಕುರಿತು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರೂ, ಶಾಲೆಯ ವಾರ್ಡನ್ ಹಾಗೂ ಪ್ರಾಂಶುಪಾಲರಿಂದ ಯಾವುದೇ ತಕ್ಷಣದ ಸ್ಪಂದನೆ ದೊರಕಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
ಸ್ಥಳೀಯರು ತಿಳಿಸಿದ ಪ್ರಕಾರ, ಕೆಲವರು ಜ್ವರ, ವಾಂತಿ ಮತ್ತು ದೇಹದ ದುರ್ಬಲತೆ ಅನುಭವಿಸುತ್ತಿದ್ದು, ಚಿಕಿತ್ಸೆಗೆ ತಡವಾದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ. ಪೋಷಕರು ಮತ್ತು ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು, ತಕ್ಷಣ ವೈದ್ಯಕೀಯ ಶಿಬಿರವನ್ನು ಆಯೋಜಿಸಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಗ್ರಹಿಸಿದ್ದಾರೆ.
ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಮಕ್ಕಳ ಆರೋಗ್ಯ ಕಾಪಾಡಲು ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.
ವರದಿ: ಜಗದೀಶ್ ಕುಮಾರ್ ಭೂಮಾ



















