ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸತತ ಮಳೆಯಿಂದ ನೀರಿನ ಹರಿವು ಹೆಚ್ಚಾಗಿ ರಸ್ತೆ ಕುಸಿತ

ಆರು ತಿಂಗಳಿಂದ ಈ ಕುರಿತು ಮಾಹಿತಿ ನೀಡಿದರೂ ಮುಂಜಾಗ್ರತೆ ತೆಗೆದುಕೊಳ್ಳದ ಅಧಿಕಾರಿಗಳು.

ಯಾದಗಿರಿ/ ಗುರುಮಠಕಲ್: ತಾಲೂಕಿನ ಗೋಪುಲಪುರ ಗ್ರಾಮದಿಂದ ಎಲ್ಹೇರಿಗೆ ಹೋಗುವ ಮುಖ್ಯರಸ್ತೆಯಲ್ಲಿ ಸತತ ಮಳೆಯಿಂದ ರಸ್ತೆ ಮೇಲೆ ಮಳೆ ನೀರು ಹೆಚ್ಚಾಗಿ ಹರಿದಿರುವ ಕಾರಣ ರಸ್ತೆಯ ಎರಡು ಬದಿಯಲ್ಲೂ ಕೊರೆತ ಉಂಟಾಗಿ ದಿನ ನಿತ್ಯ ಶಾಲೆಗೆ ಬರುವ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗಿದೆ.

ಈ ಕುರಿತು ಇಲ್ಲಿನ ಸಾರ್ವಜನಿಕರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಯಾವುದೇ ಮುಂಜಾಗ್ರತೆ ವಹಿಸದೆ ಇರುವುದರ ಪರಿಣಾಮ ಇಂದು ಟ್ರ್ಯಾಕ್ಟರ್ ವಾಹನ ರಸ್ತೆ ಕುಸಿದು ಅಲ್ಲಿಯೇ ಗುಂಡಿಯಲ್ಲಿ ಬಿದ್ದು ಪರದಾಡುವಂತಾಗಿದೆ.

ರಸ್ತೆ ಮೇಲೆ ನಡೆದಾಡುವುದಕ್ಕೆ ಜನ ಭಯ ಪಡುತ್ತಿದ್ದಾರೆ ಕೂಡಲೆ ಈ ಸಂಬಂಧ ಪಟ್ಟ ಅಧಿಕಾರಿಗಳು ಇನ್ನೂ ಯಾವುದೇ ಅನಾಹುತ ಸಂಭವಿಸುವ ಮುನ್ನ ಭೇಟಿ ನೀಡಿ ಕಾರ್ಯಚರಣೆ ಕೈ ಗೊಳ್ಳಲು ಶರಣಬಸಪ್ಪ ಎಲ್ಹೇರಿ ಕರ್ನಾಟಕ ರಕ್ಷಣಾ ವೇದಿಕೆ ಗುರುಮಠಕಲ್ ತಾಲೂಕಿನ ಅಧ್ಯಕ್ಷರು ಮನವಿ ಮಾಡಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!