ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇನ್ಸ್ಪೆಕ್ಟರ್ ಜೀಪಿಗೆ ರೂ. 500 ದಂಡ ಹಾಕಿದ ಪೊಲೀಸ್ ನೋ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದಕ್ಕೆ ಲಾಕ್

ಚಿಕ್ಕಮಂಗಳೂರು/ ಕೊಪ್ಪ : ಪಟ್ಟಣದ ನೋ ಪಾರ್ಕಿಂಗ್ ವಲಯದಲ್ಲಿ ನಿಲ್ಲಿಸಿದ ಹಿರಿಯ ಅಧಿಕಾರಿಯ ವಾಹನಕ್ಕೆ ಕಿರಿಯ ಅಧಿಕಾರಿ ದಂಡ ವಿಧಿಸಿದ ಘಟನೆ ನಡೆದಿದೆ ಈ ಕ್ರಮಕ್ಕೆ ಸ್ಥಳೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ ಸಾರ್ವಜನಿಕರಿಗೆ ಮಾತ್ರವಲ್ಲ ಕಾನೂನು ಪಾಲಕರಿಗೂ ಕಾನೂನು ಒಂದೇ ಎಂದು ಸಾಬೀತುಪಡಿಸಿದ ಘಟನೆ ಎಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ ಇಲ್ಲಿನ ಪೊಲೀಸ್ ಅಧಿಕಾರಿಗಳು ನೋ ಪಾರ್ಕಿಂಗ್ ವಲಯದಲ್ಲಿ ನಿಲ್ಲಿಸಿದ ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೆ ದಂಡ ವಿಧಿಸಿ ಸ್ಥಳೀಯರಿಂದ ಮೆಚ್ಚುಗೆ ಗಳಿಸಿದ್ದಾರೆ.

ಘಟನೆ ವಿವರಣೆ :
ಎನ್ ಆರ್ ಪುರ ತಾಲೂಕಿನ ಪೊಲೀಸ್ ಇನ್ಸ್ ಪೆಕ್ಟರ್ (ಸಿಪಿಐ) ಅವರ ಜೀಪು ಕೊಪ್ಪ ಪಟ್ಟಣದ ನೋ ಪಾರ್ಕಿಂಗ್ ಪ್ರದೇಶದಲ್ಲಿ ನೀಲಿಸಲಾಗಿತ್ತು.
ಕರ್ತವ್ಯ ನಿರತರಾಗಿದ್ದ ಕೊಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಿಎಸ್ಐ ಬಸವರಾಜ್ ಅವರು ಈ ಜೀಪನ್ನು ಗಮನಿಸಿ ತಕ್ಷಣವೇ ಅದನ್ನು ಲಾಕ್ ಮಾಡಿಸಿದ್ದಾರೆ ನಿಯಮಗಳ ಪ್ರಕಾರ ವಾಹನ ನಿಲ್ಲಿಸಬಾರದ ಜಗದಲ್ಲಿ ನಿಲ್ಲಿಸಿದ ಕಾರಣ ಜೀಪ್ ಗೆ
ರೂ.500 ದಂಡ ವಿಧಿಸಲಾಗಿದೆ ನಂತರ ಚಾಲಕ ರೂ. 500 ದಂಡವನ್ನು ಕಟ್ಟಿ ಜೀಪನ್ನು ಬಿಡಿಸಿಕೊಂಡು ಹೋಗಿದ್ದಾರೆ ಈ ಘಟನೆ ಸ್ಥಳೀಯರ ಗಮನಕ್ಕೆ ಬದಿದ್ದು ಪಿಎಸ್ಐ ಬಸವರಾಜ್ ಅವರ ನಿಷ್ಪಕ್ಷಪಾತ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರಭಾವಕ್ಕೆ ಒಳಗಾಗದೆ ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೂ ದಂಡ ವಿಧಿಸಿದ ಪಿಎಸ್ಐ ಕಾರ್ಯ ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ರವಾನಿಸಿದೆ ಇಂಥ ಪ್ರಮಾಣಿಕ ಮತ್ತು ನಿಷ್ಪಕ್ಷಪಾತ ಕಾರ್ಯಗಳು ಸಾರ್ವಜನಿಕರಲ್ಲಿ ಪೋಲೀಸರ ಬಗ್ಗೆ ವಿಶ್ವಾಸ ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ. ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದ್ದು ಪಿಎಸ್ಐ ಬಸವರಾಜ್ ಅವರ ಕಾರ್ಯವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!