ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತ

ಬಳ್ಳಾರಿ / ಕಂಪ್ಲಿ : ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ ಎಂದು ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಹೇಳಿದರು.
ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಆವರಣದಲ್ಲಿ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ಎಸ್.ಎನ್.ಪೇಟೆ ಮತ್ತು 8ನೇ ವಾರ್ಡ್ ಕ್ಲಸ್ಟರ್ ಮಟ್ಟದ ವಲಯ-1ರ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸಿದ ನಂತರ ಮಾತನಾಡಿ, ಕ್ರೀಡಾಪಟುಗಳಿಗೆ ಸರ್ಕಾರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದೆ. ಹಾಗಾಗಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಲಯ ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಇಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಿ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲೂ ವಿಜೇತರಾಗಲು ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.
ವಾಲಿಬಾಲ್, ಖೋ ಖೋ, ಕಬಡ್ಡಿ, ಥ್ರೋಬಾಲ್, ಓಟ, ಜಿಗಿತ ಸೇರಿದಂತೆ ನಾನಾ ಕ್ರೀಡೆಗಳು ನಡೆದವು.
ಇಲ್ಲಿನ ಕ್ರೀಡೆಯಲ್ಲಿ 25 ಶಾಲಾ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗನಗೌಡ ಎಂ.ಎ, ಇಸಿಒ ಎಂ.ರೇವಣ್ಣ, ಸಿಆರ್‌ಪಿ ರೇಣುಕಾರಾಧ್ಯ, ವಿಕಲಚೇತನರ ಸಂಘದ ಅಧ್ಯಕ್ಷ ಜೋಗಿ ರುದ್ರಪ್ಪನಾಯಕ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕರೆಡ್ಡಿ, ಎನ್‌ಪಿಎಸ್ ಅಧ್ಯಕ್ಷ ಎಂ.ರೇವಣಸಿದ್ದೇಶ, ಮುಖ್ಯಗುರುಗಳಾದ ರಾಜಶೇಖರ, ಚಂದ್ರಯ್ಯ ಸೊಪ್ಪಿನಮಠ, ಎಚ್.ಪಿ.ಸೋಮಶೇಖರ, ವಿಷ್ಣು, ಮುಖಂಡ ಬಿ.ಸಿದ್ದಪ್ಪ ಸೇರಿದಂತೆ ಸಹ ಶಿಕ್ಷಕರ, ದೈಹಿಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!