ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಳೆನಷ್ಟ: ಎಕರೆಗೆ 20 ಸಾವಿರ ರೂ. ಪರಿಹಾರಕ್ಕೆ ಆಗ್ರಹ

ಕಲಬುರಗಿ: ಅತಿವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡ ರೈತರಿಗೆ ಸರಕಾರ ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸುಂದರ ಡಿ‌. ಸಾಗರ ನೇತೃತ್ವದಲ್ಲಿ ಕಾಳಗಿ ಗ್ರೇಡ್ ೨ ತಹಶೀಲ್ದಾರ ಮುಖಾಂತರ ಸಿ. ಎಂ. ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಅವರು, ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ರೈತರ ಕೋಟ್ಯಂತರ ರೂ. ಫಸಲು ನಷ್ಟವಾಗಿದೆ. ಬೆಳೆ ವಿಮೆ ಪರಿಹಾರ ಇನ್ನೂ ಪಾವತಿಯಾಗಿಲ್ಲ. ಹಾಲಿನ ದರವನ್ನು ಇಳಿಸಿದ್ದರಿಂದ ಹಾಲು ಉತ್ಪಾದಕರು ಕಂಗಾಲಾಗಿದ್ದಾರೆ. ಮುಸುಕಿನ ಜೋಳದ ಬೆಲೆ ಕುಸಿದು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯ ರೈತರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದರೂ ಸರಕಾರ, ಜಿಲ್ಲಾಡಳಿತ ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.
ಅಕಾಲಿಕ ಮಳೆಯಿಂದ ಜಿಲ್ಲೆಯ ರೈತರು ಬೆಳೆದಿದ್ದ ತೊಗರಿ ಫಸಲು ನಷ್ಟವಾಗಿದೆ. ತರಕಾರಿ ಫಸಲು ನಾಶವಾಗಿದೆ. ಇವೆಲ್ಲವುಗಳ ನಷ್ಟವನ್ನು ಸರಕಾರ ತುಂಬಿಕೊಡಬೇಕು. ಹವಾಮಾನ ಹೊಂದಿಕೆಗೆ ಅನುಗುಣವಾಗಿ ಅಲ್ಪಾವಧಿ ಬೆಳೆ ಬೆಳೆಯಲು ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ಒದಗಿಸಬೇಕು. ಕೃಷಿ ಉತ್ಪನ್ನ ಮಾರಾಟದಲ್ಲಿ ದಲ್ಲಾಳಿಗಳ ಹಸ್ತಕ್ಷೇಪ ತಡೆಯಲು ಜಿಲ್ಲಾಧಿಕಾರಿಗಳು ರೈತರ ಮತ್ತು ಅಧಿಕಾರಿಗಳ ಸಭೆ ಕರೆದು ಚರ್ಚಿಸಬೇಕು ಎಂದು ಅವರು ಒತ್ತಾಯಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!