ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿರೇಆಲಗುಂಡಿಯಲ್ಲಿ 23 ನೇ ಶಿವಾನುಭವ

ಬಾಗಲಕೋಟೆ/ಮುಧೋಳ :ದಿ.7 ರಂದು ಮುಧೋಳ ತಾಲೂಕಿನ ಸುಕ್ಷೇತ್ರ ‌ಹಿರೇಆಲಗುಂಡಿಯ ಶ್ರೀ ಶಿವಲಿಂಗೇಶ್ವರ ಮಠದಲ್ಲಿ ರಾಷ್ಟ್ರೀಯ ಬಸವ ಚಿಂತನ ಬಳಗವು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಶಿವಾನುಭವ ಕಾರ್ಯಕ್ರಮವು ರವಿವಾರ ದಿ. 7 ರಂದು ಸಂಜೆ 8 ರಿಂದ 9 ರ ವರೆಗೆ ಶಿವಾನುಭವ ಸತ್ಸಂಗವು ಜರುಗಲಿದೆ. 23 ನೇ ಶಿವಾನುಭವ ಕಾರ್ಯಕ್ರಮದಲ್ಲಿ ” ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ “ಎಂಬ ವಚನವನ್ನು ಆಧಾರವಾಗಿಟ್ಟುಕೊಂಡು ಪ. ಪೂ. ಶರಣಬಸವ ಶಾಸ್ತ್ರಿಗಳು ಉಪದೇಶಾಮೃತವನ್ನು ನೀಡಲಿದ್ದಾರೆಂದು ಬಳಗದ ಮುಖ್ಯಸ್ಥರಾದ ಶ್ರೀಮತಿ ಸುಹಾಸಿನಿ ಮುರುನಾಳ ಹಾಗೂ ಗಿರಿಜಮ್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಗಳಖೋಡದಲ್ಲಿ 113 ನೇ ಸತ್ಸಂಗ ತಾಲೂಕಿನ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರವಿವಾರ ದಿ.7 ರಂದು ಮುಂಜಾನೆ 8.30ಕ್ಕೆ 1113 ನೇ ಸತ್ಸಂಗ ಕಾರ್ಯಕ್ರಮವು ಪ. ಪೂ. ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ಜರುಗಲಿದೆ. ಇದೆ ವೇಳೆಯಲ್ಲಿ ಸಿದ್ಧಾರೂಢರ ಅಭಿಷೇಕ, ಪಾರಾಯಣ, ಸಹಸ್ರ ಬಿಲ್ವಾರ್ಚನೆ, ನಾಮಜಪ ಕಾರ್ಯಕ್ರಮ ಜರುಗಲಿದೆ ಎಂದು ಆಶ್ರಮದ ಪರಮಪೂಜ್ಯ ಕುಮಾರ ಗುರುಪ್ರಸಾದ್ ಸ್ವಾಮೀಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!