ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒಳ್ಳೆಯ ಕೆಲಸ ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣಪತಿ ಪೂಜೆ ಮುಖ್ಯ : ಶಾಸಕ ಜೆ. ಎನ್. ಗಣೇಶ

ಬಳ್ಳಾರಿ / ಕಂಪ್ಲಿ: ಪಟ್ಟಣದ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಮಂಡಳಿ, ಸಮಿತಿಯವರು ಹಾಗೂ ಯುವಕರು ಪ್ರತಿಷ್ಠಾಪಿಸಿದ್ದ ವಿವಿಧ ರೂಪಗಳ ಗಣಪತಿ ಮೂರ್ತಿಗಳ ಸ್ಥಳಗಳಿಗೆ ಶಾಸಕ ಜೆ. ಎನ್. ಗಣೇಶ ಶನಿವಾರ ಸಂಜೆ ಭೇಟಿ ನೀಡಿ, ಗಣಪನ ದರ್ಶನದೊಂದಿಗೆ ಆಶೀರ್ವಾದ ಪಡೆದರು.
ಇಲ್ಲಿನ ಬಿ. ಆರ್. ಅಂಬೇಡ್ಕರ್ ವೃತ್ತದ ಬಳಿ ಲಯನ್ಸ್ ಗ್ರೂಪ್ ಯುವಕ ಸಂಘದಿಂದ ಪ್ರತಿಷ್ಠಾಪಿಸಿದ ಚಾಮುಂಡಿದೇವಿಯ ಗಣೇಶ ಮೂರ್ತಿ ಸ್ಥಳಕ್ಕೆ, ವರಲಕ್ಷಿ ಬ್ಯಾಂಕ್ ಮುಂಭಾಗ, 5ನೇ ವಾರ್ಡಿನ ಇಂದಿರಾ ನಗರದ ಗಣಪನ ಸ್ಥಳಗಳಿಗೆ ಶಾಸಕ ಗಣೇಶ ಭೇಟಿ ನೀಡಿ, ವಿವಿಧ ಆಕರ್ಷಣೆಯ ಗಣಪತಿಗಳನ್ನು ವೀಕ್ಷಿಸಿದರು. ತದನಂತರ ಪಟ್ಟಣದ ಸೋಮೇಶ್ವರ ದೇವಸ್ಥಾನದ ಹತ್ತಿರ ವೀರ ಕಂಪಿಲರಾಯ ವಿನಾಯಕ ಮಂಡಳಿಯವರ ಪ್ರತಿಷ್ಠಾಪನೆಯ ಕಂಪ್ಲಿ ಕಾ ಮಹಾರಾಜ್ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಭೇಟಿಯ ನಂತರ ಶಾಸಕ ಗಣೇಶ ಮಾತನಾಡಿ, ಯಾವುದೇ ಒಳ್ಳೆಯ ಕೆಲಸ ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣೇಶನನ್ನು ಪೂಜಿಸುವುದು ಪದ್ಧತಿ. ಇಂತಹ ಪವಿತ್ರ ಪೂಜಾ ಸ್ಥಾನ ಪಡೆದುಕೊಂಡಿರುವ ಗಣಪತಿಯನ್ನು ಪ್ರತಿಷ್ಠಾಪಿಸಿ ದೇಶದ ಆಚಾರ-ವಿಚಾರ, ಸಂಸ್ಕೃತಿ ಮುಂದುವರಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಕಂಪ್ಲಿ ಸೇರಿದಂತೆ ಕ್ಷೇತ್ರಾದ್ಯಂತ ಜನರು ಮೆಚ್ಚುವಂತಹ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಾ ಪ್ರತಿ ವರ್ಷದಂತೆ ಈ ವರ್ಷವು ಕೂಡ ಆಚರಣೆ ಮಾಡಿದ್ದಾರೆ. ಜನತೆಗೆ ಆರೋಗ್ಯ, ಆಯಸ್ಸು, ಐಶ್ವರ್ಯ, ಶಾಂತಿ, ನೆಮ್ಮದಿ ನೀಡಿ ದೇವರು ಕಾಪಾಡಲಿ. ಉತ್ತಮ ಮಳೆ, ಬೆಳೆ ಆಗಿ ರೈತರಲ್ಲಿ ಸಂತೋಷ ಉಂಟು ಮಾಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯ ಸಿ. ಆರ್. ಹನುಮಂತ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಕಂಪ್ಲಿ ಕ್ಷೇತ್ರ ಯೂತ್ ಕಾಂಗ್ರೆಸ್ ಅಧ್ಯಕ್ಷ ರಿಯಾಜ್ ಅಹಮ್ಮದ್, ಮುಖಂಡರಾದ ಬಿ. ಸಿದ್ದಪ್ಪ, ಕೆ.ಷಣ್ಮುಕಪ್ಪ, ರವಿಕಿರಣ್ ಡೆಕೊರೇಷನ್ ನ ನಾಗರಾಜ, ಗೋಪಾಲ, ಆಟೋ ರಘು, ಎನ್. ಕೆ. ಗಿರೀಶ್, ಎಲ್.ರಾಜೇಶ, ಎಸ್.ರುದ್ರಮುನಿ, ಯು.ಖಾಜಾ ಹುಸೇನ, ಶಶಿಕುಮಾರ, ವಾಸು, ಜಗದೀಶ, ಬಳ್ಳಾರಿ ಪ್ರಶಾಂತ, ಎನ್.ಮೋಹನ್ ಡೆಕೊರೇಷನ್, ಮಹೇಶ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!