ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೊಸ ನಿಲ್ಲುಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು.
ತಾಲೂಕು ಯೋಜನಾಧಿಕಾರಿ ರಾಘವೇಂದ್ರ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ ಭಾರತ ದೇಶ ಯುವಕರ ದೇಶವಾಗಿದ್ದು ಪ್ರಸ್ತುತ ದಿನಮಾನಗಳಲ್ಲಿ ಬಹಳಷ್ಟು ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಅರಿವನ್ನು ಮೂಡಿಸಿ ಸರಿದಾರಿಗೆ ತರುವುದು ಇದರ ಉದ್ದೇಶವಾಗಿದೆ ಎಂದರು.
ಸಂಪನ್ಮೂಲ ಶಿಕ್ಷಕ ಎಸ್. ರಾಮಪ್ಪ ಮಾದಕ ವ್ಯಸನಗಳಿಗೆ ಯುವಕರು ಮತ್ತು ವಿದ್ಯಾರ್ಥಿಗಳು ಬಲಿಯಾಗಲು ಕಾರಣ ಅದರಿಂದಾಗುವ ಪರಿಣಾಮ ಮತ್ತು ಹೊರಬರಲು ಅನುಸರಿಸಬೇಕಾದ ಪರಿಹಾರಗಳ ಕುರಿತು ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ಮುಖ್ಯ ಗುರು ಮಲ್ಲಮ್ಮ ವಹಿಸಿದ್ದರು. ಶಿಕ್ಷಕರಾದ ಹನುಮಂತರೆಡ್ಡಿ ಪರುಶುರಾಮ್ ಮೇಲ್ವಿಚಾರಕ ಮಂಜುನಾಥ್ ಸೇವಾ ಪ್ರತಿನಿಧಿ ರೇಣುಕಾ ಸೇರಿದಂತೆ ಸಂಘದ ಸದಸ್ಯರು ವಿದ್ಯಾರ್ಥಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















