ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಸಮುದ್ರ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ 2024-25ನೇ ಸಾಲಿನ ಶಾಸಕರ ಅನುದಾನದ ಸುಮಾರು 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಶಾಸಕ ಜೆ. ಎನ್. ಗಣೇಶ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಶಾಸಕ ಗಣೇಶ ಮಾತನಾಡಿ, ಕಂಪ್ಲಿ ತಾಲೂಕು ಸೇರಿದಂತೆ ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಜನತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾ. ಪಂ ನಾಮ ನಿರ್ದೇಶನ ಸದಸ್ಯ ಕುರಿ ನಾಗೇಶ, ಗ್ರಾ. ಪಂ ಉಪಾಧ್ಯಕ್ಷೆ ನಿರ್ಮಲಾ ಕುಬೇರ, ಸದಸ್ಯರಾದ ನಾಯಕರ ವೆಂಕೋಬ, ನಾಯಕರ ಹೊನ್ನೂರ, ಕೆ.ಬಸವರಾಜ, ಎ.ತಿಪ್ಪೇಸ್ವಾಮಿ, ಡಿಎಸ್‌ಎಸ್ ಕಂಪ್ಲಿ ತಾಲೂಕು ಸಂಚಾಲಕ ಹೆಚ್.ಗುಂಡಪ್ಪ, ಮುಖಂಡರಾದ ಸೂಗೂರು ಶೇಖರಪ್ಪ, ಅಗಸರ ಮೌನೇಶ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















