ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶೈಕ್ಷಣಕ ಪ್ರತಿಭೆ ಗೌರಿಯವರಿಗೆ ಕಲಾಕುಂಚದಿಂದ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನ

ದಾವಣಗೆರೆ:- ಜ. 30. ಕಲಾಕುಂಚದ ೩೩ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಾಲ್ಯದಿಂದಲೇ ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ನಿರಂತರವಾಗಿ ಶೈಕ್ಷಣಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಈಗ ಪದವಿಗಳಲ್ಲೂ ರ‍್ಯಾಂಕ್ ಪಡೆದ ಕುಮಾರಿ ಗೌರಿ ನರಸಿಂಹಾಚಾರ್ ಮಣ್ಣೂರು ರವರಿಗೆ ಇತ್ತೀಚಿಗೆ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಶೃಂಗಾರ ಕಾವ್ಯ ಪ್ರಕಾಶನದ ಸಂಸ್ಥಾಪಕರಾದ ಬಸವರಾಜ್ ಎಸ್. ಬಾಗೇವಾಡಿ ಮಠ, ಗೌರಿಯವರ ಮಾತಾಪಿತೃರಾದ ನರಸಿಂಹಾಚಾರ್ ಮಣ್ಣೂರು, ಶ್ರೀಮತಿ ಪರಿಮಳ ನರಸಿಂಹಾಚಾರ್ ಮಣ್ಣೂರು, ಹಿರಿಯ ಪತ್ರಕರ್ತರಾದ ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶಣೈ, ಗೌರವ ಅಧ್ಯಕ್ಷರಾದ ಶ್ರೀ ನಲ್ಲೂರು ಲಕ್ಷö್ಮಣ್‌ರಾವ್, ಪ್ರಧಾನ ಕಾರ್ಯದರ್ಶಿ ಮಹದೇವ ಅಸಗೋಡು, ಕಲಾಕುಂಚ ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರುಗಳಾದ ಶ್ರೀಮತಿ ಶಾರದಮ್ಮ ಶಿವನಪ್ಪ, ಶ್ರೀಮತಿ ಲಲಿತಾ ಕಲ್ಲೇಶ್, ಶ್ರೀಮತಿ ಪ್ರಭಾ ರವೀಂದ್ರ, ಡಾ|| ನಿರ್ಮಲಾ ವಿಶ್ವನಾಥ್ ಕುಲಕಣ ð, ಶ್ರೀ ವಿ. ಕೃಷ್ಣಮೂರ್ತಿ, ಶ್ರೀಮತಿ ವಿಜಯಲಕ್ಷ್ಮೀ
ಡಾ. ಚಂದ್ರಪ್ಪ ಹಾಗೂ ಪದಾಧಿಕಾರಿಗಳು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ