ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡ ಚಿನ್ನಹಳ್ಳಿಯಲ್ಲಿ ಎಚ್.ಐ.ವಿ/ಏಡ್ಸ್ ಕುರಿತಂತೆ ಆರೋಗ್ಯ ಕಾರ್ಯಕ್ರಮವನ್ನು ದಿನಾಂಕ 8/10/2025 ರಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಡಿಯಲ್ಲಿ ಎಚ್.ಐ.ವಿ/ಏಡ್ಸ್ ಎಂದರೇನು, ಹರಡುವಿಕೆ, ಮುಂಜಾಗ್ರತಾ ಕ್ರಮಗಳು , ಚಿಕಿತ್ಸಾಕ್ರಮಗಳ ಕುರಿತು ಮಾಹಿತಿ ನೀಡುತ್ತಾ ಸೋಂಕಿತ ವ್ಯಕ್ತಿಗೆ ಕಳಂಕ ಮತ್ತು ತಾರತಮ್ಯದ ಭಾವನೆ ತೋರಬಾರದು ತಾಲೂಕು ಮಟ್ಟದಲ್ಲಿ
ಆಪ್ತ ಸಮಾಲೋಚನೆ ಮತ್ತು ಚಿಕಿತ್ಸಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾಕ್ಟರ್ ಜಯಸುಧಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಅನಿತಾ ,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಶ್ರೀ ಮತಿ ಜಯಮ್ಮ ,ಶ್ರೀ ಮತಿ ಕವಿತಾ ಆಶಾ ಮೆಂಟರ್, ಪಳನಿ ಆರೋಗ್ಯ ನಿರೀಕ್ಷಣಾಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ವರದಿ ನಾರಾಯಣ ಸ್ವಾಮಿ ಸಿ.



















