ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ವರದಾನ : ಕೆ. ಶ್ರೀನಿವಾಸರಾವ್

ಬಳ್ಳಾರಿ / ಕಂಪ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ವರದಾನವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಂಪ್ಲಿ ತಾಲ್ಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್ ತಿಳಿಸಿದರು.
ಅವರು ತಾಲ್ಲೂಕಿನ ಎಮ್ಮಿಗನೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಸಹಯೋಗದಲ್ಲಿ ಏರ್ಪಡಿಸಿದ್ದ “ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿಗಳ ಕಡೆ ” ಎನ್ನುವ ವಿನೂತನ ಕಾರ್ಯಕ್ರಮದ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಫಲಾನುಭವಿಗಳೊಂದಿಗೆ ಕುಂದು ಕೊರತೆ ನಿವಾರಣಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ರಾಜ್ಯ ಸರ್ಕಾರವು ಬಡ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲಿ ಎಂದರು.
ಮುಖಂಡ ಜಡೆಪ್ಪ ಮಾತನಾಡಿ, ಗ್ಯಾರಂಟಿಗಳು ಬಡ ಮಧ್ಯಮ ವರ್ಗಕ್ಕೆ ಅನುಕೂಲವಾಗಿವೆ. ಆದರೆ, ಶಕ್ತಿಯೋಜನೆ ಮಾತ್ರ ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೀವ್ರವಾದ ತೊಂದರೆ ಅನುಭವಿಸುವಂತಾಗಿದೆ ಎಂದರು.
ಈ ಸಂದರ್ಭದಲ್ಲಿ ತದ ನಂತರ ತಾಲ್ಲೂಕಿನ ನೆಲ್ಲುಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೇ ನೆಲ್ಲುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಸಹಯೋಗದಲ್ಲಿ ಏರ್ಪಡಿಸಿದ್ದ “ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿಗಳ ಕಡೆ” ಎನ್ನುವ ವಿನೂತನ ಕಾರ್ಯಕ್ರಮದ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಫಲಾನುಭವಿಗಳೊಂದಿಗೆ ಕುಂದು ಕೊರತೆ ನಿವಾರಣಾ ಸಭೆ ಜರುಗಿತು.
ಪ್ರಗತಿ ಪರಿಶೀಲನೆ ಸಭೆಯಲ್ಲಿ ತಾ.ಪಂ.ಇಒ ಆರ್.ಕೆ.ಶ್ರೀಕುಮಾರ್, ಎರಡು ಗ್ರಾಮ ಪಂಚಾಯತಿಗಳ ಅಧ್ಯಕ್ಷರಾದ ಎಚ್.ಜೆ.ಶಾರದಾ, ಜಯಮ್ಮ, ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರುಗಳಾದ ಶೀನಪ್ಪ, ಮಂಜುನಾಥ್, ಹನುಮಯ್ಯ, ರುದ್ರಮ್ಮ, ಪಿಡಿಒಗಳಾದ ತಾರಾನಾಯ್ಕ್, ಶೇಷಗಿರಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರುಗಳಾದ ವಿಜಯಲಕ್ಷಿ, ರೇಣುಕಮ್ಮ, ಕರಿಯಪ್ಪ, ರಾಜಾಭಕ್ಷಿ, ಮುಖಂಡರಾದ ಸದಾಶಿವಪ್ಪ, ಜಡೆಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!