ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ವರದಿಗೆ ಸಾಥ್ ನೀಡಿದ ಸ್ಥಳೀಯರು :ಸಿ. ಎಂ. ಕಚೇರಿಯಿಂದ ಮಾದ್ಯಮ ಪ್ರಕಟಣೆ

ಮದ್ಯ ಪ್ರೇಮಿಗಳ ತಾಣವಾದ ಇಂದಿರಾ ಮಾರುಕಟ್ಟೆ ವರದಿಗೆ ಸ್ಪಂದಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ CMO.

ಇದೇ ಸೆಪ್ಟೆಂಬರ್ 9ರಂದು ಗುರುಮಠಕಲ್ ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನ ಹಿಂಭಾಗದಲ್ಲಿರುವ ಇಂದಿರಾ ಗಾಂಧಿ ತರಕಾರಿ ಮಾರುಕಟ್ಟೆಯ ಕುರಿತಾಗಿ “ಕರುನಾಡ ಕಂದ.ಕಾಮ್ ನಲ್ಲಿ ವರದಿ ಮಾಡಿದ ಬೆನ್ನಲ್ಲೇ ಸ್ಥಳೀಯ ಶ್ರೀಕಾಂತ್ ತಲಾರಿಯವರು ಮುಖ್ಯ ಮಂತ್ರಿಗಳ ಕಚೇರಿಗೆ ಎಕ್ಸ್ ಖಾತೆ ಮೂಲಕ ಹಂಚಿಕೆ ಮಾಡಿರುತ್ತಾರೆ,ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಲು ಮಾನ್ಯ ಮುಖ್ಯ ಮಂತ್ರಿಗಳ ಕಚೇರಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಶ್ರೀ ನಗರೇಶ್ವರ ದೇವಸ್ಥಾನದ ಹಿಂದೆ ಇರುವ ಇಂದಿರಾ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅನಧಿಕೃತ ಚಟುವಟಿಕೆಗಳನ್ನು ಮಾಡುತ್ತಿರುವುದಾಗಿ ‘ ಎಕ್ಸ್‌ ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ತಂದಿರುತ್ತಾರೆ. ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಸದರಿ ಮಾರುಕಟ್ಟೆಯನ್ನು ಸ್ವಚ್ಛಗೊಳಿಸಿದ್ದು, ರಾತ್ರಿ ಸಮಯದಲ್ಲಿ ಮಾರುಕಟ್ಟೆಯಲ್ಲಿ ಯಾವುದೇ ಅನೈತಿಕ ಚಟುವಟಿಕೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಲು ತಾಲ್ಲೂಕಿನ ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಜೊತೆಗೆ ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲಾಗಿದೆ ಎಂದು ಗುರುಮಠಕಲ್‌ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ತ್ವರಿತ ಗತಿಯಲ್ಲಿ ಕಾರ್ಯಚರಣೆ ಕೈಗೊಳ್ಳಲು ಸಹಕರಿಸಿದ ಎಲ್ಲಾ ಕರುನಾಡ ಕಂದ ಪತ್ರಿಕೆಯ ಓದುಗರಿಗೆ ಧನ್ಯವಾದಗಳು.

ವರದಿ ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!