ಬೆಂಗಳೂರು: ನಟ, ಸಾಹಸ ಸಿಂಹ ವಿಷ್ಣುವರ್ಧನ್ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿ. ಎಂ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಮಾಡಲಾಗಿದೆ.
ಸಚಿವ ಹೆಚ್. ಕೆ. ಪಾಟೀಲ್ ಅವರು ಈ ವಿಷಯ ತಿಳಿಸಿದರು. ಈ ಸಿಹಿ ಸುದ್ದಿ ಕೇಳಿ ಅಭಿಮಾನಿಗಳಿಗೆ ಬಹಳ ಸಂತಸ ಆಗಿದೆ. ಈ ಮೊದಲು ಚಿತ್ರರಂಗದಿಂದ ಡಾ. ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು.
ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ ಕನ್ನಡ ಚಿತ್ರರಂಗದ ಲೆಜೆಂಡರಿ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಇದು ಅವರ ಅಭಿಮಾನಿಗಳಿಗೆ ಅಪಾರ ಸಂತಸ ಉಂಟುಮಾಡಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅದೇ ರೀತಿ ಬಿ. ಸರೋಜಾದೇವಿ ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು.
ಅಲ್ಲದೆ, ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟವು ನಿರ್ಧರಿಸಿದೆ.
ವರದಿ : ಜಿಲಾನಸಾಬ್ ಬಡಿಗೇರ್



















