ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಜಾನುವಾರುಗಳು ಮೃತಪಡುತ್ತಿರುವ ಹಿನ್ನೆಲೆಯಲ್ಲಿ, ತಾಲೂಕು ಪಶು ವೈದ್ಯಾಧಿಕಾರಿ ಡಾ. ಸಿದ್ದರಾಜು ಅವರು ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ,ನಂತರ ಮೃತ ಮೂರು ಕರುಗಳ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮಾತನಾಡಿದ ಅವರು ರಕ್ತದ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು. ನಂತರ ಮಾತನಾಡಿದ ಅವರು ಜಾನುವಾರುಗಳ ಸಾವು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಇದ್ದರು.
ವರದಿ ಉಸ್ಮಾನ್ ಖಾನ್



















