ಕೊಪ್ಪಳ :ದಿನಾಂಕ 15/9/2025 ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಿ ಸಂವಿಧಾನದ ಪೀಠಿಕೆಯನ್ನು ಪ್ರತಿಜ್ಞಾವಿಧಿಯಾಗಿ ಸ್ವೀಕರಿಸಲಾಯಿತು. ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು ಡಾ. ಪ್ರದೀಪ್ ಕುಮಾರ್ ದೈಹಿಕ ಶಿಕ್ಷಣ ನಿರ್ದೇಶಕರು ನಿರೂಪಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಡಾ. ಹುಲಿಗೆಮ್ಮ, ಪ್ರೊ. ವಿಠೋಬ, ಎಸ್, ಡಾ.ಮಲ್ಲಿಕಾರ್ಜುನ, ಡಾ. ನರಸಿಂಹ, ಡಾ.ಅಶೋಕ ಕುಮಾರ, ಸುಮಿತ್ರಾ ಎಸ್. ವಿ, ಶುಭಾ.ಟಿ., ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
- ಕರುನಾಡ ಕಂದ




















