ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಮಕ್ಕಳಲ್ಲಿ ಜ್ಞಾನವನ್ನು ಹೆಚ್ಚಿಸಿ ಬೌದ್ಧಿಕವಾಗಿ ಬಲಗೊಳಿಸುವವನೇ ನಿಜವಾದ ಶಿಕ್ಷಕ “: ಪೂಜ್ಯ ಶ್ರೀ ಮಹಾಲಿಂಗ ದೇವರು

ಬೀದರ್ :ಅಲ್ಲಮಪ್ರಭು ಶಿಕ್ಷಣ ಮಹಾವಿದ್ಯಾಲಯ, ತಳವಾಡ (ಕೆ), ಭಾಲ್ಕಿಯಲ್ಲಿ ದಿನಾಂಕ : 16-09-2025ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಒಂದು ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯವಾದದ್ದು, ತಮ್ಮ ಜೀವನದುದ್ದಕ್ಕೂ ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವನ್ನು ಮೂಡಿಸಿ ಜ್ಞಾನವನ್ನು ನೀಡುವಂತವರು ಶಿಕ್ಷಕರು. ಜೀವನ ಸಮಯದ ಸದುಪಯೋಗ ಕಲಿಸಿದರೆ, ಸಮಯ ಬದುಕಿನ ಮೌಲ್ಯ ತಿಳಿಸುತ್ತದೆ. ಶಿಕ್ಷಣ ಮಾನವನಿಗೆ ಉತ್ತಮ ಮೌಲ್ಯಗಳನ್ನು ಕೌಶಲ್ಯಗಳೊಂದಿಗೆ ಮತ್ತು ಅನುಭವಗಳೊಂದಿಗೆ ತಿಳಿಸುತ್ತಾ ಹೋಗುತ್ತದೆ. ಮಕ್ಕಳಲ್ಲಿ ಜ್ಞಾನವನ್ನು ಹೆಚ್ಚಿಸಿ ಅವರನ್ನು ಇನ್ನಷ್ಟು ಬೌದ್ಧಿಕವಾಗಿ ಬಲಗೊಳಿಸುವವನೇ ನಿಜವಾದ ಶಿಕ್ಷಕನಾಗಿರುತ್ತಾನೆ. ಮಕ್ಕಳಲ್ಲಿರುವ ಪ್ರತಿಭೆಗೆ ಪ್ರೋತ್ಸಾಹಕೊಟ್ಟು ಮುನ್ನಡೆಸುತ್ತಾರೆ. ಶಿಕ್ಷಕರು ಕೇವಲ ಅಕ್ಷರಗಳನ್ನು ಕಲಿಸುವವರಲ್ಲ, ಬದಲಿಗೆ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಮತ್ತು ಅವರಿಗೆ ಭವಿಷ್ಯದ ಸವಾಲುಗಳನ್ನು ಎದುರಿಸಲು ಪ್ರೇರಣೆ ನೀಡುವ ದೀಪಸ್ತಂಭಗಳಾಗಿದ್ದಾರೆ. ಅವರು ವಿದ್ಯಾರ್ಥಿಗಳ ಬೌದ್ಧಿಕ, ನೈತಿಕ ಮತ್ತು ಸಾಮಾಜೀಕ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಭಾಲ್ಕಿಯ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಮಹಾಲಿಂಗ ದೇವರು, ಅಭಿವ್ಯಕ್ತಪಡಿಸಿದರು.
ಕಾರ್ಯಕ್ರಮದ ದಿವ್ಯ ಸಮ್ಮುಖ ವಹಿಸಿದ ಶ್ರೀ ಪ್ರಭುಲಿಂಗ ದೇವರು ಮಾತನಾಡಿ ಭಾರತದ ಭವಿಷ್ಯದ ಶಿಲ್ಪಿಗಳೆಂದರೆ ಶಿಕ್ಷಕರು, ಶಿಕ್ಷಕರಾದವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಿಸುವರಾಗಬೇಕೆಂದರು.
ಕಾರ್ಯಕ್ರಮದ ದಿವ್ಯನೇತೃತ್ವವನ್ನು ಪೂಜ್ಯ ಶ್ರೀ ಬಸವಲಿಂಗ ಗುರುಗಳು ವಹಸಿದರು.
ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ಮೋಹನ್ ರೆಡ್ಡಿ, ಆಡಳಿತಾಧಿಕಾರಿಗಳು ಶಿಕ್ಷಕ ವೃತ್ತಿಯು ಹೊಣೆಗಾರಿಕೆ ಮತ್ತು ಜವಾಬ್ದಾರಿಯುತವಾದಂತಹ ಹುದ್ದೆಯಾಗಿದೆ. ಸಮಾಜದಲ್ಲಿ ಉತ್ತಮ ಆರೋಗ್ಯಕರ ವಾತಾವರಣ ನಿರ್ಮಿಸುವರಾಗಬೇಕು. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡ ಕೊಡುಗೆಯಾಗಿದೆಯೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಪಾಂಡುರಂಗ ವಿ. ಕುಂಬಾರ ಮಾತನಾಡಿ ಒಂದು ದೇಶದ ಶಿಕ್ಷಣ ವ್ಯವಸ್ಥೆಯು ಆ ದೇಶದ ಶಿಕ್ಷಕರ ಗುಣಮಟ್ಟವನ್ನು ಆಧರಿಸಿದೆ. ದೇಶ ನಿರ್ಮಾಣ ಆಗುವುದು ತರಗತಿಯಲ್ಲಿ. ಶಿಕ್ಷಕರಾದವರು ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿಗಳಿಗೆ ಬೋಧಿಸಿದಾಗ ಮಾತ್ರ ಮಕ್ಕಳಲ್ಲಿ ಉತ್ತಮ ಕೌಶಲ್ಯಗಳನ್ನು ಬೆಳೆಸಲು ಸಾಧ್ಯವೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಬಸವರಾಜ ಮೋಳಕೆರೆ, ಶ್ರೀ ಬಾಲಾಜಿ ವಲ್ಲೂರೆ ವಹಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ಬಿ.ಇಡಿ. ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮಹೇಶ ಸ್ವಾಗತಿಸಿದರು, ಸಹನಾ ನಿರೂಪಿಸಿದರು ಮತ್ತು ಬಾಲಯ್ಯ ವಂದಿಸಿದರು.

ವರದಿ: ಸಾಗರ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!