ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ಮಟ್ಟದ ದಸರಾ ಸಿ.ಎಂ. ಕಪ್ ಆಯ್ಕೆಗೊಂಡ ಎಸ್. ಪೂಜಾ

ಬಳ್ಳಾರಿ / ಕಂಪ್ಲಿ : ಬೀದರ್ ನಗರದಲ್ಲಿ ಸೋಮವಾರ ನಡೆದ ಕಲಬುರ್ಗಿ ವಿಭಾಗದ ಮಟ್ಟದ ದಸರಾ ಸಿ. ಎಂ. ಕಪ್ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಕಂಪ್ಲಿ ವಿದ್ಯಾರ್ಥಿನಿ ಎಸ್. ಪೂಜಾ ಇವರು ದ್ವಿತೀಯ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಗೊಳ್ಳುವ ಮೂಲಕ ಕೀರ್ತಿ ಪತಾಕೆ ಹಾರಿಸಿದ್ದಾಳೆ. ಇಲ್ಲಿನ ಜಿಲ್ಲಾಡಳಿತ, ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ್ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಸಹಯೋಗದಲ್ಲಿ ಬೀದರ್‌ನ ನಂದಿ ನಗರದ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕಲಬುರ್ಗಿ ವಿಭಾಗದ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಂಪ್ಲಿ ಯಕ್ಷ ಯೋಗ ಅಕಾಡೆಮಿ ಕೇಂದ್ರದ ವಿದ್ಯಾರ್ಥಿನಿ ಹಾಗೂ ಹೊಸಪೇಟೆಯ ಎಪಿಜೆ ಅಬ್ದುಲ್ ಕಲಾಂ ಸಿ.ಬಿ.ಎಸ್.ಸಿ ವಸತಿ ಶಾಲೆಯಲ್ಲಿ 7ನೇತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್.ಪೂಜಾ. ಸಾಧನೆಗೈದು, ಕಂಪ್ಲಿ ತಾಲೂಕಿಗೆ ಕೀರ್ತಿ ತರುವ ಜೊತೆಗೆ ಯೋಗಾಭಿಮಾನಿಗಳ ಗಮನ ಸೆಳೆದಿದ್ದಾಳೆ. ಸಿಲ್ವರ್ ಮೆಡಲ್ ಮತ್ತು ಚಾಂಪಿಯನ್ ಶಿಪ್ ಕಪ್ ಪಡೆದುಕೊಳ್ಳುವ ಮೂಲಕ ಪ್ರಶಸ್ತಿ ಪತ್ರ ಸ್ವೀಕರಿಸಿದಳು. ವಿಭಾಗ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದು, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಯಿಸಿ ಬರಲೆಂದು ಆಶಿಸಲಾಗಿದೆ. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕಿ ಪದ್ಮಾವತಿ, ತರಬೇತಿದಾರಿ ಖುದ್ದೂಸ್, ಕಂಪ್ಲಿ ಯಕ್ಷ ಯೋಗ ಅಕಾಡೆಮಿ ಕೇಂದ್ರದ ಸಂಸ್ಥಾಪಕಿ ಎಂ. ಶಾಮಲಮ್ಮ, ಯೋಗ ಶಿಕ್ಷಕ ಚಂದ್ರಶೇಖರ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!