ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶೃಂಗೇರಿ ಲಾಡ್ಜ್ ರಹಸ್ಯ: ಹಿಂದೂ ಮಹಿಳೆ ಸಂಬಂಧಕ್ಕಾಗಿ ರಮೇಶನಾಗಿ ಬದಲಾದ ಅಬ್ದುಲ್!

ಚಿಕ್ಕಮಗಳೂರು :ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದು ಬಯಲಾಗಿದೆ.
ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್ (42) ಎಂಬ ವ್ಯಕ್ತಿ, ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದನು. ಈ ವೇಳೆ, ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು. ಆದರೆ, ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದಾಗ, ಸಮದ್ ಕೊಟ್ಟ ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ, ಅದು ನಕಲಿ ಎಂದು ಗೊತ್ತಾಗಿದೆ. ಅಬ್ದುಲ್ ಸಮದ್ ತನ್ನ ಅಸಲಿ ಹೆಸರನ್ನು ಬದಲಿಸಿ, ‘ರಮೇಶ್’ ಎಂಬ ಹೆಸರಿನಲ್ಲಿ ಆಧಾರ್ ಕಾರ್ಡ್ ಎಡಿಟ್ ಮಾಡಿಸಿಕೊಂಡಿದ್ದನು.
ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಶೃಂಗೇರಿ ಪೊಲೀಸರು , ಅಬ್ದುಲ್ ಸಮದ್ ಮತ್ತು ಆತನ ಜೊತೆಗಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ನಂತರದ ತನಿಖೆಯಲ್ಲಿ, ಅಬ್ದುಲ್ ಸಮದ್ ಬೇರೆ ಕೋಮಿನ ವ್ಯಕ್ತಿಯಾಗಿದ್ದು, ಹಿಂದೂ ಹೆಸರಿನಲ್ಲಿ ಗುರುತಿನ ಚೀಟಿ ನಕಲಿ ಮಾಡಿಸಿಕೊಂಡಿದ್ದು ದೃಢಪಟ್ಟಿದೆ. ಸದ್ಯ, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದನ್ನು ತೋರಿಸುತ್ತದೆ. ಹಾಗಾಗಿ ಸಾರ್ವಜನಿಕರು ಈ ಬಗ್ಗೆ ಎಚ್ಚರ ವಹಿಸಬೇಕು.

ವರದಿ : ಪ್ರಸಾದ್ ಹೆಚ್ ಬಿ ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!