ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕದಲ್ಲಿ ಯೂಟ್ಯೂಬರ್‌ಗಳಿಗೆ ಪರವಾನಗಿ ಕಡ್ಡಾಯ : ಸಿ.ಎಂ ಸಿದ್ದರಾಮಯ್ಯ ಸುಳಿವು

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಯೂಟ್ಯೂಬರ್‌ಗಳಿಗೆ ಪರವಾನಗಿ ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿ. ಎಂ ಸಿದ್ದರಾಮಯ್ಯ ಹೇಳಿದರು

ಹುಬ್ಬಳ್ಳಿ: ರಾಜ್ಯದ ಯೂಟ್ಯೂಬರ್‌ಗಳು ತಮ್ಮ ಚಾನೆಲ್‌ಗಳನ್ನು ಪ್ರಾರಂಭಿಸಲು ಪರವಾನಗಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಹಿನ್ನೆಲೆಯಲ್ಲಿ ಯೂಟ್ಯೂಬ್ ಬಳಕೆದಾರರು ಕೆಲವು ವಿವಾದಾತ್ಮಕ ವಿಷಯಗಳನ್ನು ಪ್ರಸಾರ ಮಾಡಲು ಮತ್ತು ಹೆಚ್ಚು ಜನಪ್ರಿಯತೆ ಗಳಿಸಲು ಚಾನೆಲ್‌ಗಳನ್ನು ಬಳಸುತ್ತಿದ್ದಾರೆ ಎಂಬ ಆರೋಪದ ವಿರುದ್ಧ ಕರ್ನಾಟಕ ಎಲೆಕ್ಟ್ರಾನಿಕ್ ಮಾಧ್ಯಮ ಪತ್ರಕರ್ತರ ಸಂಘದ ಬೇಡಿಕೆಯ ಮಧ್ಯೆ ಸಿ. ಎಂ. ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಸಿ. ಎಂ ಸಿದ್ದರಾಮಯ್ಯ ನೂತನ ಸಂಘವನ್ನು ಉದ್ಘಾಟಿಸಿ ಮಾತನಾಡಿ ಅಭಿವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸೋ ಕೆಲಸ ಎಂದೂ ಮಾಡಲ್ಲ
ವೆಬ್ ಪೋರ್ಟಲ್, ಯ್ಯೂಟ್ಯೂಬ್ ಗಳಿಗೆ ಕೂಡಾ ಪರವಾನಗಿ ಪಡೆಯಬೇಕು, ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ, ಪತ್ರಕರ್ತರು ಸತ್ಯ ಹೇಳೋ ಕೆಲಸ ಮಾಡಬೇಕು, ಎಲೆಕ್ಟ್ರಾನಿಕ್ ಮೀಡಿಯಾಗಳ ಮೇಲೆ ಜನ ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಆ ಭರವಸೆ ಸುಳ್ಳಾಗದಂತೆ ನೋಡಿಕೊಳ್ಳಬೇಕು. ಗಾಳಿ ಸುದ್ದಿ, ಊಹಾ ಪತ್ರಿಕೋದ್ಯಮ ಮಾಡಬಾರದು. ಪರಿಶೀಲನೆ ಮಾಡಿ ಸುದ್ದಿ ಪ್ರಸಾರ ಮಾಡಬೇಕು. ನಾನು ಎಂದಿಗೂ ನನ್ನ ಬಗ್ಗೆ ಒಳ್ಳೆಯದನ್ನು ಬರೆಯಿರಿ ಅಂತ ಹೇಳಿಲ್ಲ. ಟೀಕೆ ಮಾಡಿ ಬರೆದಾಗ ಯಾಕೆ ಬರಿದಿರಿ ಅಂತ ಕೇಳಿಲ್ಲ ಸುಳ್ಳುಸುದ್ದಿಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇದನ್ನು ನಿಯಂತ್ರಣ ಮಾಡಲು ಕಾನೂನು ಮಾಡಲು ಮುಂದಾಗಿದ್ದೇವೆ. ಪತ್ರಕರ್ತರು ಶಿಕ್ಷಕರಿದ್ದಂತೆ. ನೀವು ನ್ಯಾಯವಾಗಿರಿ, ನೈಜ ವಿಚಾರವನ್ನು ಪ್ರಚಾರ ಮಾಡಿ. ಸತ್ಯ ಇದೆಯಾ ಅನ್ನೋದನ್ನು ಪರಿಶೀಲಿಸಿ. ಪತ್ರಕರ್ತರಿಗಾಗಿ ಹಲವಾರು ಯೋಜನೆ ಜಾರಿಗೆ ತಂದಿದ್ದೇವೆ. ನಿಮ್ಮ ಜೊತೆ ಇರ್ತೇವೆ, ಆದರೆ ಸತ್ಯವನ್ನು ಬರೀರಿ ಎಂದರು.
ಕಾರ್ಯಕ್ರಮದಲ್ಲಿ ಸಚಿವರಾದ ಸಂತೋಷ ಲಾಡ್, ಚಲುವರಾಯಸ್ವಾಮಿ, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಪ್ರಸಾದ್ ಅಬ್ಬಯ್ಯ, ಮಹೇಶ್ ಟೆಂಗಿನಕಾಯಿ, ಎಂ. ಆರ್. ಪಾಟೀಲ, ಅಶೋಕ್ ಪಟ್ಟಣ, ವಿಜಯಾನಂದ ಕಾಶಪ್ಪನವರ, ಬಸವರಾಜ್ ಶಿವಣ್ಣವರ ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!