ಗಂಗಾವತಿ: ರಾಜ್ಯ ಸರ್ಕಾರ ಬಡ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ಸಮರ್ಪಕವಾಗಿ ವಿತರಿಸುವಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದ ಲ್ಯಾಪ್ಟಾಪ್ ಯೋಜನೆ,ಬಡವರ, ಮಧ್ಯಮ ವರ್ಗದವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಸ್ಥಗಿತಗೊಂಡಿದ್ದು ಬಿಜೆಪಿ ಸರ್ಕಾರ ಬಡ ಮತ್ತು ಮಧ್ಯಮ ವರ್ಗದವರ ವಿರುದ್ಧವಾಗಿದೆ, ಗಂಗಾವತಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿದ್ದು ಪರಿಹರಿಸುವಲ್ಲಿ ಜನಪ್ರತಿನಿಧಿಗಳು ಸಂಪೂರ್ಣ ವಿಫಲವಾಗಿದ್ದಾರೆ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಭವಿಷ್ಯ ಜೊತೆಗೆ ಚೆಲ್ಲಾಟವಾಡುತ್ತಿರುವ ಬಿಜೆಪಿ ಸರ್ಕಾರದ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ, ಮೊದಲೇ ಭ್ರಷ್ಟಾಚಾರ, ಬೆಲೆ ಏರಿಕೆ ರೈತ ವಿರೋಧಿ, ಕಾರ್ಮಿಕರ ವಿರೋಧಿ ನೀತಿಗಳಿಂದಾಗಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ಗಂಗಾವತಿ ಸೇರಿದಂತೆ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಉಪಾಧ್ಯಕ್ಷರಾದ ವಿಶ್ವನಾಥ್ ಮಾಲಿ ಪಾಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ