ಕೊಪ್ಪಳ :ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ 7.30 ಕ್ಕೆ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಯಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಅವರು ದ್ವಿತೀಯ ಸ್ಥಾನ ಪಡೆದು ಪ್ರಮಾಣ ಪತ್ರ ಹಾಗೂ ₹3,500/- ನಗದು ಬಹುಮಾನವನ್ನು ಪಡೆದರು. ಹಾಗೆಯೇ, ವಿದ್ಯಾರ್ಥಿನಿ ಸರಿತಾ ಚೌಹಾನ್ ಅವರು ತೃತೀಯ ಸ್ಥಾನ ಪಡೆದು ಪ್ರಮಾಣ ಪತ್ರದೊಂದಿಗೆ ₹2,500/- ನಗದು ಬಹುಮಾನವನ್ನು ಗಳಿಸಿದರು. 4ನೇ ಸ್ಥಾನವನ್ನು ಭೂಮಿಕಾ ಇವರು ಪಡೆದರೆ 5ನೇ ಸ್ಥಾನವನ್ನು ಯಶೋಧ ಇವರು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಯನ್ನು ಮೆಚ್ಚಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪ್ರದೀಪ್ ಕುಮಾರ ಯು. ಹಾಗೂ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
- ಕರುನಾಡ ಕಂದ



















