ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಕಲಿಕಾ ಹಬ್ಬದ ಉದ್ಘಾಟನೆ

ಹಾವೇರಿ ಹಾನಗಲ್ ತಾಲೂಕು ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಕಲಿಕಾ ಹಬ್ಬದ ಉದ್ಘಾಟನೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರಾಮಚಂದ್ರ ಓಲೆಕಾರ ಡೋಲ ಬಡಿಯುವ ಮೂಲಕ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿದರು ಕೊಪ್ಪರಸಿಕೊಪ್ಪ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಕೊಪ್ಪರಸಿಕೊಪ್ಪದಲ್ಲಿ ಮಾಡಲಾಯಿತು ಈ ಒಂದು ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ 8 ಶಾಲೆಗಳ ವಿದ್ಯಾರ್ಥಿಗಳು ಶಿಕ್ಷಕರುಂದದವರು ಭಾಗವಹಿಸಿದ್ದರು ಈ ಕಾರ್ಯಕ್ರಮದ ಕೇಂದ್ರ ಬಿಂದುವಾದ ಸಮೂಹ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಸಿದ್ದಲಿಂಗೇಶ್ವರ ಕಾಯಿಕದ ಮತ್ತು ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಎಸ್ ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಎಸ್ ಡಿ ಎಂ ಸಿ ಅಧ್ಯಕ್ಷರು ಸರ್ವ ಸದಸ್ಯರು ಊರ ನಾಗರಿಕರು ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು ಎಲ್ಲರೂ ಒಟ್ಟುಗೂಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಲಿಕಾ ಚೇತರಿಕೆಯ ಅಕ್ಷರ ರಥವನ್ನು ಮೆರವಣಿಗೆ ಮಾಡಲಾಯಿತು ನಂತರ ಶಾಲೆಯ ಮೈದಾನಕ್ಕೆ ಬಂದು ವೇದಿಕೆಯ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಿ ಉದ್ಘಾಟಿಸಿದರು. ನಂತರ ಮಾತನಾಡಿ ಕಲಿಕಾ ಹಬ್ಬದ ಕುರಿತು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಹಬ್ಬದ ಮಹತ್ವವನ್ನು ತಿಳಿಸಿದರು. ಕಲಿಕಾ ಹಬ್ಬದ ವಿಶೇಷತೆ ಏನೆಂದರೆ ಪಕ್ಕದ ಶಾಲೆಯ ಕಿರಿಯ ಪ್ರಾಥಮಿಕ ಶಾಲೆ ಗುಡುಗುಡಿ ಮಕ್ಕಳಿಂದ ಬಬ್ರುವಾಹನ ಪ್ರದರ್ಶನ ಎಲ್ಲರ ಗಮನ ಸೆಳೆಯುವಂತೆ ಮೂಡಿ ಬಂದಿತು.

ವರದಿಗಾರರು. ರವಿ ಓಲೆಕಾರ. ಕೊಪ್ಪರಸಿಕೊಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!