ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ, ದಸರಾ ಉದ್ಘಾಟಿಸಿದ : ಬಾನು ಮುಷ್ತಾಕ್

ಮೈಸೂರು : ದಸರಾ ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು.

ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅವರು ಇಂದು ಉದ್ಘಾಟಿಸಿದರು.

“ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ” ಎಂದರು.

“ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ, ಮಾನವೀಯಪರ ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ, ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ” ಎಂದರು.

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ಸವಾಲು ಎಸೆದರು.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ” ಎಂದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!