ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಗನೂರು ಗ್ರಾಮದಲ್ಲಿ ಪಶು ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ ರೈತರಿಂದ ಪಿ.ಡಿ.ಒ ಅವರಿಗೆ ಮನವಿ ಸಲ್ಲಿಕೆ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕೊಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಕಲಿ, ಗೋವಿನಕೊಪ್ಪ, ನಾಗರಮಡ ವು.ತಂಗೋಡ ಗ್ರಾಮಗಳ ರೈತರು ಇಂದು ಕೊಗನೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರಿಗೆ ಪಶು ಆಸ್ಪತ್ರೆ ಸ್ಥಾಪನೆಗೆ ಮನವಿ ಪತ್ರವನ್ನು ಸಲ್ಲಿಸಿದರು. ಈ ಗ್ರಾಮ ಪಂಚಾಯತಿಯ ಹಳ್ಳಿಗಳಲ್ಲಿ ಜಾನುವಾರುಗಳ ಸಂಖ್ಯೆ ಹೆಚ್ಚಿದ್ದರೂ, ಯಾವುದೇ ಪಶು ಆಸ್ಪತ್ರೆ ಅಥವಾ ಚಿಕಿತ್ಸಾ ಕೇಂದ್ರ ಇಲ್ಲದಿರುವುದರಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಈ ಮನವಿಯಲ್ಲಿ ವಿವರಿಸಲಾಗಿದೆ.
ಗ್ರಾಮಸ್ಥರು ಹೇಳುವಂತೆ, ತಮ್ಮ ಜಾನುವಾರುಗಳಿಗೆ ಅನಾರೋಗ್ಯ ಕಾಣಿಸಿಕೊಂಡಾಗ ದೂರದ ಊರಿಗೆ ಕರೆದೊಯ್ಯಬೇಕಾದ ಪರಿಸ್ಥಿತಿ ಇದೆ. ಇದರಿಂದ ಸಮಯ ಮತ್ತು ಹಣ ಎರಡೂ ವ್ಯರ್ಥವಾಗುತ್ತಿದ್ದು, ಕೆಲವು ಸಂದರ್ಭಗಳಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಜಾನುವಾರುಗಳು ಮೃತಪಟ್ಟ ಘಟನೆಗಳೂ ನಡೆದಿವೆ. ಈ ಸಮಸ್ಯೆಗಳನ್ನು ಪರಿಗಣಿಸಿ, ಕೂಡಲೇ ಕೊಗನೂರಿನಲ್ಲಿ ಪಶು ಆಸ್ಪತ್ರೆಯನ್ನು ಸ್ಥಾಪಿಸುವಂತೆ ಮನವಿ ಮಾಡಲಾಯಿತು.
ಕೊಗನೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮನವಿ ಸ್ವೀಕರಿಸಿ, ಈ ಬೇಡಿಕೆಯನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಅಲ್ಲದೆ, ರೈತರ ಹಿತದೃಷ್ಟಿಯಿಂದ ಪಶು ಆಸ್ಪತ್ರೆ ಸ್ಥಾಪನೆಗೆ ಸರ್ಕಾರದ ನೆರವು ಪಡೆಯಲು ಪ್ರಯತ್ನಿಸುವುದಾಗಿಯೂ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ರಾಖೇಶ ಬೂದಿಹಾಳ, ರಾಜು ಎಚ್, ನಾಗೇಂದ್ರ ಬೀರಬ್ಬಿ, ಶರಣಪ್ಪ ಎನ್ ಕೂರಗುಂದ, ಚನ್ನವೀರಯ್ಯ ಹಿರೇಮಠ, ಗಂಗಪ್ಪ ಇತರೆ ರೈತ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಶು ಆಸ್ಪತ್ರೆ ಸ್ಥಾಪನೆಯಿಂದ ಗ್ರಾಮದ ಆರ್ಥಿಕತೆಗೆ ಮತ್ತು ರೈತರ ಜೀವನಮಟ್ಟಕ್ಕೆ ಸಹಕಾರಿಯಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.

ರಾಖೇಶ ಬೂದಿಹಾಳ, ಶಿರಹಟ್ಟಿ ವರದಿಗಾರರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!