
ಕಲಬುರಗಿ/ ಸೇಡಂ ತಾಲೂಕಿನ ಮಲ್ಕಾಪಲ್ಲಿ ಗ್ರಾಮದಲ್ಲಿ 3.11 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾಗಿರುವ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯಕೀಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ನೂತನ ಕಟ್ಟಡ ಸುಸಜ್ಜಿತ 8 ಕೋಣೆಗಳು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕಾಂಪೌಂಡ್ ತಡೆ ಗೋಡೆ ಒಳಗೊಂಡಿದ್ದು, ಕೆಕೆಆರ್ಡಿಬಿಯ ಅಕ್ಷರ ಆವಿಷ್ಕಾರ ಯೋಜನೆ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಅತ್ಯುತ್ತಮ ಶಾಲೆಗಳನ್ನಾಗಿಸಲು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷರು ಮತ್ತು ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಪರಿಶ್ರಮದ ಫಲವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಈ ಭಾಗದ ಅನೇಕ ಬಡ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದೊರಕುವಂತಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಕೋಲಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಬಸವರಾಜ ಮಾಲಿ ಮಾಲಿಪಾಟೀಲ, ಶಂಕರಗೌಡ, ವೆಂಕಟರೆಡ್ಡಿ, ಬಸಿರೆಡ್ಡಿ ಮುನಕನಪಲ್ಲಿ ,ವೀರಶೇಖರ ಸಜ್ಜನ, ಮಲ್ಕಾಪಲ್ಲಿ ಗ್ರಾಮದ ಹಿರಿಯ ಮುಖಂಡರು, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಪಕ್ಷದ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.
- ಕರುನಾಡ ಕಂದ



















