ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಹಕಾರ ಸಂಘಕ್ಕೆ 6.6 ಲಕ್ಷ ನಿವ್ವಳ ಲಾಭ : ಅಧ್ಯಕ್ಷ ಗುಂಡಾಲ ಯರ‍್ರಿಸ್ವಾಮಿ

ಬಳ್ಳಾರಿ/ ಕಂಪ್ಲಿ : ಸುಮಾರು 81.35ಲಕ್ಷ ವ್ಯಾಪಾರ ವಹಿವಾಟು ನಡೆಸಿ, ಸುಮಾರು 2.90 ಲಕ್ಷ ವ್ಯಾಪಾರ ಲಾಭ ಹೊಂದಿದ್ದು, ಸಂಘವು 2024-25ನೇ ಸಾಲಿನಲ್ಲಿ ಸುಮಾರು 6.6 ಲಕ್ಷ ನಿವ್ವಳ ಲಾಭಗಳಿಸಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಗುಂಡಾಲ ಯರ‍್ರಿಸ್ವಾಮಿ ಹೇಳಿದರು.
ಇಲ್ಲಿನ ಕುಡತಿನಿ ಪಟ್ಟಣದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ವಾರ್ಷಿಕ ಮಹಾಜನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘವು ಅಭಿವೃದ್ಧಿಯತ್ತ ಸಾಗುತ್ತಿದ್ದು, ಇನ್ನಷ್ಟು ಬೆಳವಣಿಗೆಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಮುಖ್ಯ ಕಾರ್ಯನಿರ್ವಾಹಕ ಆಂಜಿನೇಯ ಪದ್ಮಶಾಲಿ ಇವರು ವಾರ್ಷಿಕ ವರದಿ ಮಂಡಿಸಿ ಮಾತನಾಡಿ, ಸಂಘವು 8296 ಜನ ಸದಸ್ಯರನ್ನು ಹೊಂದಿದ್ದು, ಸುಮಾರು 2.22 ಕೋಟಿ 17 ಸಾವಿರ ಶೇರು ಬಂಡವಾಳ ಹೊಂದಿದೆ. 1977 ಜನ ರೈತ ಸದಸ್ಯರಿಗೆ 11.51 ಕೋಟಿ ಕೆಸಿಸಿ ಬೆಳೆ ಸಾಲ ವಿತರಿಸಿದೆ ಎಂದರು.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಸಾಧನೆ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವೈ.ಷಣ್ಮುಖ, ನಿರ್ದೇಶಕರಾದ ಪಿ.ಅನಿಲ, ಟಿ.ಬಸವರಾಜ, ಪರಶುರಾಮ ಚೌಡ್ಕಿ, ನಾಗಲಿಂಗಪ್ಪ, ಮರಿಸ್ವಾಮಿ, ಎಸ್.ನೆಟಗಂಟೆಪ್ಪ, ಚಂದ್ರಹಾಸ, ಎಂ.ಛಾಯಾದೇವಿ, ನಾಗಮ್ಮ, ಶಶಿಕಲಾ ಸೇರಿದಂತೆ ಜನಪ್ರತಿನಿಧಿಗಳು, ರೈತ ಮುಖಂಡರು ಹಾಗೂ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!