ಗುರುಮಠಕಲ್: ಸೆ 25. ರಾಜ್ಯದ ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮುಂತಾದ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-1 ರಲ್ಲಿರುವ ಬೇರೆ ಸಮುದಾಯದವರಾದ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಜೇರ, ಕೂಲಿ, ಮುಂತಾದ ಜಾತಿಯವರು ಅಕ್ರಮವಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚಿಸುತ್ತಿರುವ ಹಾಗೂ ಅನ್ಯ ಸಮುದಾಯದವರು ಎಸ್. ಟಿ ಪಟ್ಟಿಗೆ ಸೇರಿಸುತ್ತಿರುವುದರ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ನೈಜ ತಳವಾರ ಜಾತಿಯವರು ವಂಚಿತರಾಗುತ್ತಿದ್ದು ಕೂಡಲೆ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯರವರಿಗೆ ತಾಲೂಕಿನ ತಹಶೀಲ್ದಾರ್ ಶಾಂತಗೌಡ ಬಿರಾದಾರ ಮೂಲಕ ಗುರುಮಠಕಲ್ ತಾಲೂಕು ವಾಲ್ಮೀಕಿ ನಾಯಕರ ಸಂಘದ ವತಿಯಿಂದ ಮನವಿ ನೀಡಿದರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ನರಸಪ್ಪ ದೊರೆ, ಅಧ್ಯಕ್ಷ ಕಾಶಪ್ಪ ದೊರೆ, ಕಾರ್ಯದರ್ಶಿ ತಿಮ್ಮಯ್ಯ ನಾಯಕ, ಖಜಾಂಚಿ ಶ್ರೀನಿವಾಸ ಸಂಬ್ರಾ, ಉಪಾಧ್ಯಕ್ಷರಾದ ಬಾಬು ದೊರೆ, ಭೀಮಪ್ಪ ನಾಯಕ, ಸಂಘಟನಾ ಕಾರ್ಯದರ್ಶಿ ನಿಂಗಪ್ಪ ನಾಯಕ, ಆನಂದ ನಾಯಕ, ಭೀಮಪ್ಪ ನಾಯಕ, ಬುಜಪ್ಪ ನಾಯಕ, ಶೇಖಪ್ಪ, ಕುರುಮೂರ್ತಿ ಹಾಜರಿದ್ದರು.
ವರದಿ: ಜಗದೀಶ್ ಕುಮಾರ್ ಭೂಮಾ.



















