ಬಳ್ಳಾರಿ/ ಕಂಪ್ಲಿ : ತಾಯಿ ಮತ್ತು ಮಗು ಮರಣ ಹೊಂದಿದ ಹಿನ್ನಲೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ದೇಶನ ಮೇರೆಗೆ ಮೂರು ಜನರ ಮಹಿಳಾ ತಂಡವು ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ, ಘಟನೆ ವಿವರವನ್ನು ಕೂಲಂಕುಶವಾಗಿ ಪರಿಶೀಲಿಸಿ, ಘಟನೆಯ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಹಾಗೂ ಸ್ಟಾಫ್ ನರ್ಸ್ಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿ ಹಾಗೂ ಕಂಪ್ಲಿ ತಾಲೂಕು ನೋಡಲ್ ಅಧಿಕಾರಿ ಡಾ.ಪೂರ್ಣಿಮಾ, ಸ್ತ್ರೀರೋಗ ತಜ್ಞೆ ಡಾ.ಶಾರದಾ, ಚಿಕ್ಕಮಕ್ಕಳ ತಜ್ಞೆ ಡಾ.ರೂಪಾ ಇವರು ಇಲ್ಲಿನ ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವದಾಗಿ ತಿಳಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಪತ್ರಕರ್ತರು ಪೋಟೋ ತೆಗೆಯಲು ಅವಕಾಶ ಮಾಡಿಕೊಡಲು ತಿಳಿಸಿದರೆ, ಅಧಿಕಾರಿಗಳ ತಂಡ ಪೋಟೋ ನೀಡಲು ನಿರಾಕರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಅರುಣ್‌ಕುಮಾರ ಹಾಗೂ ಇತರೆ ಅಧಿಕಾರಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















