ದೆಹಲಿ : ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14ರಂದು ಮತ ಎಣಿಕೆ ಮಾಡಲಾಗುತ್ತದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ನವೆಂಬರ್ 6ರಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಕುರಿತು ಅಕ್ಟೋಬರ್ 10ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಮತ್ತು ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 20 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.
ನವೆಂಬರ್ 11ರಂದು ಎರಡನೇ ಹಂತದಲ್ಲಿ, 122 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಬಗ್ಗೆ ಅಕ್ಟೋಬರ್ 13ರಂದು ಅಧಿಸೂಚನೆ ಹೊರಡಿಸಲಾಗುವುದು. ಎರಡನೇ ಹಂತದ ನಾಮಪತ್ರ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ. ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ ಅಕ್ಟೋಬರ್ 23 ಆಗಿದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್



















