ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಷಕಾರಿ ರಾಸಾಯನಿಕ ಇರುವ ಕೆಮ್ಮಿನ ಸಿರಪ್ ಸೇವಿಸಿ ಸಾವು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದ ಕೆಲವು ಮಾರ್ಗ ಸೂಚಿ ಬಿಡುಗಡೆ.

ಬೆಂಗಳೂರು: ವಿಷಕಾರಿ ರಾಸಾಯನಿಕ ಇರುವ ಕೆಮ್ಮಿನ ಸಿರಪ್ ಸೇವಿಸಿ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ 14 ಮಕ್ಕಳು ಮೃತಪಟ್ಟಿದ್ದು, ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸರ್ಕಾರವು ಮಹತ್ವದ ಮಾರ್ಗಸೂಚಿ ಕೊಟ್ಟಿದೆ.

ಸರ್ಕಾರದ ಪ್ರಕಟಣೆ ಏನು?

ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಸಾರ್ವಜನಿಕರು ಈ ಕೆಳಗಿನ ಮಾರ್ಗದರ್ಶನಗಳನ್ನು ಅನುಸರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಸೂಚಿಸಿದೆ.

  1. ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ,
    2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು.
    2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುವುದು.
  2. ಹಿರಿಯ ಮಕ್ಕಳಲ್ಲಿ ಕೆಮ್ಮಿನ ಸಿರಪ್ ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಬಳಸಬೇಕು.
    ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಿ.
    ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್ ಗಳನ್ನು ಉಪಯೋಗಿಸಬಾರದು.
  3. ಸುರಕ್ಷಿತ ಮನೆಮದ್ದುಗಳು
    ಹೆಚ್ಚಿನ ಸಂದರ್ಭಗಳಲ್ಲಿ ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸೌಮ್ಯವಾಗಿರುತ್ತದೆ ಮತ್ತು ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ.
    ಪೋಷಕರು ಮಕ್ಕಳಿಗೆ,
    ಸಾಕಷ್ಟು ದ್ರವ ಪದಾರ್ಥಗಳನ್ನು ನೀಡುವುದು
    ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು,
    ಪೌಷ್ಟಿಕ ಆಹಾರವನ್ನು ನೀಡುವುದು
  4. ಸ್ವಯಂ ಔಷಧೋಪಚಾರ ಮಾಡಬೇಡಿ
    ವೈದ್ಯರ ಪ್ರಿಸ್ಕ್ರಿಪ್ಟನ್ ಇಲ್ಲದೆ ಕೆಮ್ಮಿನ ಸಿರಪ್ ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ.
    ಈ ಹಿಂದೆ ಬಳಸಿ ಉಳಿದ ಔಷಧಿಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಿಗಳನ್ನು ಬಳಸುವುದನ್ನು ನಿಲ್ಲಿಸಿ.
    ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆಯನ್ನು ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ವರದಿ ಮಾಡಿ.
    ಯಾವಾಗಲೂ ಔಷಧದ ಅವಧಿ ಮುಗಿಯುವ ದಿನಾಂಕಗಳನ್ನು (expiry date) ಪರಿಶೀಲಿಸಿ ಮತ್ತು ಲೇಬಲ್ ಗಳನ್ನು ಎಚ್ಚರಿಕೆಯಿಂದ ಓದಿ.

ನಿಮ್ಮ ಮಕ್ಕಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ:

ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು ಅತಿಯಾದ ಜ್ವರ ಅಥವಾ ಆಹಾರ ತಿರಸ್ಕರಿಸುವುದು.
ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಔಷಧಿಗಳ ತರ್ಕಬದ್ಧ ಬಳಕೆಯನ್ನು ಉತ್ತೇಜಿಸಲು ಮತ್ತು ಕೆಮ್ಮು ಸಿರಪ್ ಗಳ ಅನುಚಿತ ಬಳಕೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಸರ್ಕಾರದ ಆರೋಗ್ಯ ಇಲಾಖೆಯು ಈ ಸಲಹೆಯನ್ನು ನೀಡಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!