ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವ ಮೆಟ್ರೋ : ಸಿ. ಎಂ. ಹೇಳಿಕೆಗೆ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತ

ಮೈಸೂರು : ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸಂತಸ ತಂದಿದೆ ಎಂದು ಕನ್ನಡ‌ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ
ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ, ಇದು ಸ್ವಾಗತಾರ್ಹ ಬಸವಣ್ಣನವರ ಅಭಿಮಾನಿಗಳಲ್ಲಿ ಅತ್ಯಂತ ಸಂತಸ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಮ ಸಮಾಜದ ನಿರ್ಮಾಣಕ್ಕೆ ಮತ್ತು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವವನ್ನು ಸಾರುತ್ತ ಜಾತಿ ಪದ್ಧತಿ ನಿರ್ಮೂಲನೆಗೆ ಪಣ ತೊಟ್ಟು ೧೨ ನೇ ಶತಮಾನದಲ್ಲಿ ವಿಶ್ವಕ್ಕೆ ಸಂದೇಶ ಸಾರಿದ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಹೆಸರನ್ನು ಕರ್ನಾಟಕದ ರಾಜಧಾನಿಯ ಲಕ್ಷಾಂತರ ಜನ ಪ್ರಯಾಣಿಸುವ ನಮ್ಮ ಮೆಟ್ರೋ ಸ್ಟೇಷನ್ ಗೆ ಇಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೃದಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತೇಜಸ್ವಿ ಹೇಳಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!