ಕೊಪ್ಪಳ / ಗಂಗಾವತಿ : ಬಿಜೆಪಿಯ ಯುವ ಮೊರ್ಚಾ ನಗರ ಅಧ್ಯಕ್ಷ ವೆಂಕಟೇಶ (34) ಇವರ ಬರ್ಬರವಾಗಿ ಹತ್ಯೆಯಾಗಿದೆ.
ಮಧ್ಯರಾತ್ರಿ ಎರಡು ಗಂಟೆಯ ಸುಮಾರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ – ರಾಯಚೂರು ರಸ್ತೆಯಲ್ಲಿರುವ ರಿಲಾಯನ್ಸ್ ಡಿಜಿಟಲ್ ಮಾಲ್ ಎದರಿಗೆ ನಾಲ್ಕೈದು ದುಷ್ಕರ್ಮಿಗಳ ತಂಡ ಕಾರಿನಿಂದ ವೆಂಕಟೇಶ ಮತ್ತು ಪ್ರಜ್ವಲ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಿಳಿಸಿ, ಮಚ್ಚು ಲಾಂಗುಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾರೆ, ಇನ್ನೊಬ್ಬ ಯುವಕ ಪ್ರಜ್ವಲ್ ಗೆ ಗಾಯಗಳಾಗಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ, ಕೊಲೆಗಡುಕರು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ, ಕೊಲೆಗೆ ಕಾರಣ ತಿಳಿದುಬಂದಿಲ್ಲ.
ನಗರ ಠಾಣೆ ಪೊಲೀಸರು ಮೃತ ದೇಹವನ್ನು ಪೊಸ್ಟ್ ಮಾರ್ಟಮ್ ಗೆ ಕಳುಹಿಸಿ ದುಷ್ಕರ್ಮಿಗಳನ್ನು ಹಿಡಿಯಲು ಬಲೆ ಬೀಸಿದ್ದಾರೆ.
ಘಟನೆ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾವತಿಗೆ ಆಗಮಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















