ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲೆಯಲ್ಲಿ ಇಂಗ್ಲೀಷ್ ನಾಮಫಲಕ ತೆರವಿಗೆ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಮನವಿ

ಬೀದರ್ ಜಿಲ್ಲೆಯ ಕೇಂದ್ರ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಇಂಗ್ಲೀಷ್ ಭಾಷೆಯ ನಾಮಫಲಕಗಳು ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸುವಂತೆ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಸ್ವಾಮಿದಾಸ ಕೆಂಪೆನೋರ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಮನವಿ ಪತ್ರದಲ್ಲಿ, ಅಕ್ಟೋಬರ್ 15ರೊಳಗಾಗಿ ಬೀದರ್ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಇರುವ ಎಲ್ಲ ಇಂಗ್ಲೀಷ್ ಮತ್ತು ಹಿಂದಿ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಇಲ್ಲವಾದರೆ, ಸೇನೆಯ ಸದಸ್ಯರು ಸ್ವಯಂಪ್ರೇರಿತ ಹೋರಾಟ ಆರಂಭಿಸಿ, ಇಂಗ್ಲೀಷ್ ಮತ್ತು ಹಿಂದಿ ಫಲಕಗಳ ಮೇಲೆ ಕಪ್ಪುಮಸಿ ಹಚ್ಚಿ ‘ಕನ್ನಡ ಬೆಳಸಿ, ಕನ್ನಡ ಉಳಿಸಿ’ ಎಂದು ಬರೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಲಾಗಿದೆ.
“ಕನ್ನಡ ರಾಜ್ಯ ಸರ್ಕಾರವು ‘ಮೊದಲು ಕನ್ನಡ’ ಎಂಬ ನಿಬಂಧನೆ ಜಾರಿಗೆ ತಂದಿದ್ದರೂ, ಬೀದರ್ ಜಿಲ್ಲೆಯಲ್ಲಿ ವ್ಯಾಪಾರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಹೋಟೆಲುಗಳು ಹಾಗೂ ಬಸ್‌ಗಳ ಮೇಲೆ ಇಂಗ್ಲೀಷ್ ನಾಮಫಲಕಗಳು ಹೆಚ್ಚಾಗಿವೆ. ಇದರ ವಿರುದ್ಧ ಜಿಲ್ಲಾಡಳಿತ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿ ಕುಳಿತಿದೆ” ಎಂದು ಆರೋಪಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕರಾದ ಶಿವರಾಜ ನೇಲವಾಳಕರ್, ಜಿಲ್ಲಾ ಅಧ್ಯಕ್ಷ ಜೇಮ್ಸ್ ಇಸ್ಲಾಂಪೂರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಿರಾಜೋದ್ದೀನ್ ಪಟೇಲ್ ಸೇರಿದಂತೆ ಇತರರು ಇದ್ದರು.

ವರದಿ: ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!