ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಮಠಕಲ್ | ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿ ಸಿದ್ದತೆ: ಹೊಸ ನೋಂದಣಿಗೆ ಮಾರ್ಗಸೂಚಿ ನೀಡಿದ ತಹಸೀಲ್ದಾರ್

ಯಾದಗಿರಿ/ ಗುರುಮಠಕಲ್: ಅ.9 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿದ್ದು, ಅರ್ಹ ನೋಂದಣಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರ್ ಶಾಂತಗೌಡ ಬಿರಾದಾರ್ ತಿಳಿಸಿದ್ದಾರೆ.

ನವೆಂಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಈ ಹೊಸ ಪಟ್ಟಿ ಸಿದ್ಧಪಡಿಸುವ ಕಾರ್ಯ ಆರಂಭವಾಗಿದೆ. ಹಿಂದಿನ ಪಟ್ಟಿಯಲ್ಲಿ ಹೆಸರು ಹೊಂದಿರುವ ಮತದಾರರು ಕೂಡ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಮಾರ್ಗಸೂಚಿಯಂತೆ ವೇಳಾಪಟ್ಟಿಯು ನವೆಂಬರ್ 6, ಅರ್ಜಿ ನಮೂನೆ 19 ಸ್ವೀಕರಿಸಲು ಕೊನೆಯ ದಿನವಾಗಿದೆ. ನವೆಂಬರ್ 25ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗುವದು. ನವೆಂಬರ್ 25 ರಿಂದ ಡಿಸೆಂಬರ್ 10ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ. ಡಿ.30 ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವದು.

ಅರ್ಹತೆ: ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ, 2025ರ ನವೆಂಬರ್ 1ಕ್ಕೆ ಮುಂಚಿನ 6 ವರ್ಷಗಳಲ್ಲಿ ಒಟ್ಟು ಕನಿಷ್ಠ 3 ವರ್ಷಗಳ ಕಾಲ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.

ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ನಮೂನೆ 19 ಅನ್ನು ಭರ್ತಿ ಮಾಡಿ, ತಮ್ಮ ಸಂಸ್ಥೆಯಿಂದ ಪಡೆದ ಅನುಬಂಧ-2 ರ ಪ್ರಮಾಣಪತ್ರದೊಂದಿಗೆ ಸಲ್ಲಿಸಬೇಕು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!