ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಪ್ಪಳದಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ

ನವೆಂಬರ್ ಒಂದಕ್ಕೆ ಬೆಂಗಳೂರಿನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ

ಕೊಪ್ಪಳ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು.
ನಗರದ ಶ್ರೀ ಗವಿ ಸಿದ್ದೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಿ ಬಸವೇಶ್ವರ ಸರ್ಕಲ್, ಅಶೋಕ ವೃತ್ತ,ಹೊಸ ಬಸ್ ನಿಲ್ದಾಣದ ಮೂಲಕ ಪಾದಯಾತ್ರೆ ಮಾಡಿ ಅಭಿಯಾನದ ಕುರಿತು ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸೋಮಸುಂದರ ಅವರು ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ. ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ರಾಜ್ಯದ ಮತದಾರರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ, ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀ ಜೋಗನಹಳ್ಳಿ ಗುರುಮೂರ್ತಿ ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನುನಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಇದಕ್ಕೆ ಕನ್ನಡಪರ, ರೈತಪರ, ಪ್ರಗತಿಪರ ಸಂಘಟನೆಗಳ ಮುಖಂಡರು, ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ್, ಪ್ರಸನ್ನ ಕುಮಾರ್,ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ, ಶಿವರಾಜ್ ಕಪಗಲ್, ಕನಕಪ್ಪ ಉಡೆಜಾಲಿ,ಜಿಲ್ಲಾ ಮುಖಂಡರಾದ ಗಣೇಶ್ ಅಮೃತ್, ಎ ಇಚ್ಛ,ಗೋಡಚಳ್ಳಿ, ನಾಗರಾಜ್,ಬಸರಾಜ್ ಯಲಬುರ್ಗಾ,ಮೈನು,ಗಣೇಶ್ ಸಾರಂಗಿ,ಗಣೇಶ್ ಶಿಂದೆ, ಮೆಹಬೂಬ್,ಶಾಮಿದ ಅಲಿ, ವೀರೇಶ್ ಉಡಮಕಲ್, ಹುಸೇನ್ ಬಾಷಾ, ಮಲ್ಲಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!