ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ವಿಶ್ವಕರ್ಮ ಮಹಿಳಾ ಮಂಡಳಿ ರಚನೆ : ನೂತನ ಪದಾಧಿಕಾರಿಗಳ ಆಯ್ಕೆ

ಕಂಪ್ಲಿ : ಪಟ್ಟಣದ ಕಾಳಿಕಾ ಕಮಠೇಶ್ವರ
ದೇವಸ್ಥಾನದಲ್ಲಿ ನಡೆದ ಕಂಪ್ಲಿ ವಿಶ್ವಕರ್ಮ ಸಮುದಾಯದ ಮಹಿಳಾ ಮುಖಂಡರ ಸಭೆಯಲ್ಲಿ ವಿಶ್ವಕರ್ಮ ಮಹಿಳಾ ಮಂಡಳಿಯ ರಚನೆ ಬಗ್ಗೆ ಚರ್ಚಿಸಿ ನೂತನ ವಿಶ್ವಕರ್ಮ ಮಹಿಳಾ ಮಂಡಳಿಯನ್ನು ರಚನೆಯ ಜೊತೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು. ವಿಶ್ವಕರ್ಮ ಮಹಿಳಾ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಡಿ.ವೀಣಾಮೌನೇಶ್, ಉಪಾಧ್ಯಕ್ಷೆಯಾಗಿ ಎ.ಜಯಲಕ್ಷ್ಮೀ, ಡಿ.ಸುಜಾತಾ, ಕಾರ್ಯದರ್ಶಿಯಾಗಿ ಎ.ಶಶೀಕಲಾ, ಸಹಕಾರ್ಯದರ್ಶಿಯಾಗಿ ಭಾರತಿ, ಖಜಾಂಚಿಯಾಗಿ ಪಿ.ಭಾರತಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಿ.ವಿಜಯಲಕ್ಷ್ಮೀ, ಲಾವಣ್ಯ, ಪದ್ಮಾವತಿ, ಎ.ಭಾರತಿ, ನಾಗರತ್ನ, ಎ.ವಸಂತ, ಕೆ.ಶಾರದಾ, ಎ.ಕಲಾವತಿ, ಪೂಜಾ ಭರತ್ ಸೇರಿದಂತೆ ಇತರರನ್ನು ಆಯ್ಕೆ ಮಾಡಿದರು. ನೂತನ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳಿಗೆ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ಸುಜ್ಞಾನಮೂರ್ತಿ ಆಯ್ಕೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹರಿಸಿದರು. ನಂತರ ಮಾತನಾಡಿದ ಅವರು ಮಹಿಳಾ ಸಂಘಗಳಿಗೆ ಸರ್ಕಾರದ ಅನೇಕ ಸೌಲಭ್ಯಗಳಿದ್ದು, ಅವುಗಳನ್ನು ಅರಿತಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದರು. ಈ ಸಂದರ್ಭದಲ್ಲಿ ಕಂಪ್ಲಿ ತಾಲ್ಲೂಕು ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಡಿ.ರುದ್ರಪ್ಪಾಚಾರ್, ಮುಖಂಡರಾದ ಡಿ.ಮೌನೇಶ್, ಎ.ಚಂದ್ರಶೇಖರ್, ಕಾಳಾಚಾರಿ, ಗುರುಮೂರ್ತಿ, ರಾಘವೇಂದ್ರ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!