ಬಳ್ಳಾರಿ / ಕಂಪ್ಲಿ : ಕಂಪ್ಲಿ ಪಟ್ಟಣ ಸ್ವಚ್ಚವಾಗಿರಲು ಪೌರ ಕಾರ್ಮಿಕರ ಪರಿಶ್ರಮವೇ ಮುಖ್ಯ ಕಾರಣ. ಆದ್ದರಿಂದ ಮುಂದಿನ ದಿನದಲ್ಲಿ ನಿವೇಶನ ಜೊತೆಗೆ ಸೂರಿ ಒದಗಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದ ಹೌಸಿಂಗ್ ಬೋರ್ಡ್ ಆವರಣದಲ್ಲಿ ಸೋಮವಾರ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅವರ ಆಯೋಜಕತ್ವದಲ್ಲಿ ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರ ಕಾರ್ಮಿಕರಿಗೆ ಉಚಿತವಾಗಿ ಸಮವಸ್ತ್ರ ವಿತರಿಸಿ ಮಾತನಾಡಿ, ಇಂತಹ ಒಳ್ಳೆಯ ಕಾರ್ಯಗಳು ವಿರಳ. ಅಂತದರಲ್ಲಿ ಕಳೆದ ಹತ್ತು ವರ್ಷದಿಂದ ಸಮವಸ್ತ್ರ ವಿತರಣೆ ಮೂಲಕ ಸಮಾಜ ಸೇವೆ ಮಾಡಿಕೊಂಡು ಬಂದಿದ್ದಾರೆ. ಪೌರ ಕಾರ್ಮಿಕರಿಗೆ ನಿವೇಶನ ನೀಡುವ ಸಂಬಂಧ ಸೂಕ್ತ ಕ್ರಮವಹಿಸಲಾಗಿದೆ. ಮಕ್ಕಳಿಗೆ ಉನ್ನತ ಶಿಕ್ಷಣದ ಮೂಲಕ ದೊಡ್ಡ ದೊಡ್ಡ ಹುದ್ದೆಗಳೊಂದಿಗೆ ಕುಟುಂಬವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ. ದುಶ್ಚಟಗಳಿಂದ ದೂರ ಇರುವ ಮೂಲಕ ಸುಂದರ ಬದುಕು ಕಟ್ಟಿಕೊಳ್ಳಬೇಕು. ನಗರಸಭೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸುವ ಮೂಲಕ ಇನ್ನಿತರರಿಗೆ ಪ್ರೇರಣೆಯಾಗಿದ್ದಾರೆ ಎಂದರು.
ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಮಾತನಾಡಿ, ಪಟ್ಟಣ ಸ್ವಚ್ಚತೆಯಿಂದ ಕೂಡಿರಲು ಪೌರ ಕಾರ್ಮಿಕರ ಪಾತ್ರ ಅತಿಮುಖ್ಯವಾಗಿದೆ. ಕಳೆದ ಹತ್ತು ವರ್ಷದಿಂದ ಪೌರ ಕಾರ್ಮಿಕರಿಗೆ ಸಮವಸ್ತ್ರಗಳನ್ನು ವಿತರಿಸಲಾಗುತ್ತಿದೆ ಸರ್ಕಾರದ ಯೋಜನೆಗಳನ್ನು ಪೌರ ಕಾರ್ಮಿಕರಿಗೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸರಾವ್, ಪುರಸಭೆ ಸದಸ್ಯರಾದ ಸಿ.ಆರ್.ಹನುಮಂತ, ಲೊಡ್ಡು ಹೊನ್ನೂರವಲಿ, ವೀರಾಂಜನೇಯಲು, ಮೌಲಾ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಮುಖಂಡರಾದ ಸೈಯದ್ ಉಸ್ಮಾನ್, ಷಣ್ಮುಕಪ್ಪ, ಆಟೋ ರಘು, ಶ್ರೀನಿವಾಸ, ಸುಧಾಕರ, ಪೇಂಟರ್ ಮಸ್ತಾನ್, ಅಕ್ಕಿ ಜಿಲಾನ್ ಸೇರಿದಂತೆ ಪುರಸಭೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















