ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೌಲಭ್ಯಗಳ ಸದ್ಭಳಕೆಯೊಂದಿಗೆ ಪ್ರಗತಿ ಹೊಂದಿ : ರೇಖಾ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕಲ್ಮಠ ಐಟಿಐ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಜೀವನ ರೂಪಿಸುವಲ್ಲಿ ಶಿಕ್ಷಣದ ಮಹತ್ವ ಕುರಿತು ಅರಿವು ಕಾರ್ಯಕ್ರಮ ಬುಧವಾರ ಜರಗಿತು.
ತಾಲೂಕು ಸಮನ್ವಯ ಅಧಿಕಾರಿ ರೇಖಾ ಮಾತಾಡಿ, ಸಂಸ್ಥೆಯು ಶೈಕ್ಷಣಿಕ ಹಿತ ಕಾಪಾಡುವ ದೃಷ್ಟಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ವೃತ್ತಿಪರ ಶಿಕ್ಷಣ ಪಡೆಯುತ್ತಿದ್ದರೆ ಶಿಷ್ಯವೇತನ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಬಳಕೆ ಮಾಡಿಕೊಂಡು ಪ್ರಗತಿ ಹೊಂದಬೇಕು ಎಂದರು.
ನಂತರ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಎಸ್.ರಾಮಪ್ಪ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ ಮೌಲ್ಯಗಳು ಕಣ್ಮರೆಯಾಗುತ್ತಿದ್ದು, ಶಿಕ್ಷಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಣ ಮಾನವ ಜೀವನದ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಮತ್ತು ಜೀವನ ನಿರ್ವಹಣೆ ಮೂಲಕ ಪ್ರತಿಯೊಬ್ಬರಿಗೆ ಮಾದರಿಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಅಂಬರೀಶ್, ಶಿಕ್ಷಕರಾದ ಕುಮಾರ್, ಸದಾನಂದ, ಸೇವಾ ಪ್ರತಿನಿಧಿ ವಾಣಿಶ್ರೀ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!