ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಮೃತ ನೋಂದಾಯಿತ ಹಮಾಲಿ ಕುಟುಂಬಕ್ಕೆ ಎಪಿಎಂಸಿಯಿಂದ 25 ಸಾವಿರ ರೂ.ಗಳ ಚೆಕ್ ವಿತರಣೆ

ಬಳ್ಳಾರಿ / ಕಂಪ್ಲಿ : ಎಪಿಎಂಸಿಯಲ್ಲಿ ನೋಂದಾಯಿಸಿಕೊಂಡ ಸಣಾಪುರ ಗ್ರಾಮದ ಹಮಾಲಿ ವೃತ್ತಿ ಮಾಡುತ್ತಿದ್ದ ಜಡಿಯಪ್ಪ ಅಕಾಲಿಕವಾಗಿ ಸಾವನ್ನಪ್ಪಿದ್ದು, ಮೃತ ಕುಟುಂಬದ ಸದಸ್ಯರಿಗೆ ಎಪಿಎಂಸಿಯಿಂದ ನೀಡುವ ಅಂತ್ಯಕ್ರಿಯೆ ಖರ್ಚಿಗೆ 25 ಸಾವಿರ ರೂಗಳ ಚೆಕ್ಕನ್ನು ಎಪಿಎಂಸಿ ಅಧ್ಯಕ್ಷರಾದ ಎನ್. ಹಬೀಬ್ ರೆಹಮಾನ್ ಅವರು ಮಂಗಳವಾರ ಕಂಪ್ಲಿ ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶಾಸಕರಾದ ಜೆ. ಎನ್. ಗಣೇಶ್ ಅವರ ಮೂಲಕ ವಿತರಿಸಿದರು.
ಮೃತ ಕುಟಂಬದ ಸದಸ್ಯರಿಗೆ ಪರಿಹಾರ ಚೆಕ್ ವಿತರಿಸಿದ ನಂತರ ಶಾಸಕ ಜೆ.ಎನ್.ಗಣೇಶ ಮಾತನಾಡಿ, ಮನೆಯ ಹಿರಿಯನನ್ನು ಕಳೆದುಕೊಂಡ ಕುಟುಂಬ ಅನಾಥವಾಗಿದೆ. ಅವರ ಕುಟುಂಬಕ್ಕೆ ಎಪಿಎಂಸಿಯಿಂದ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ವಿಮೆ ಹಣವೂ ಬರಲಿದೆ. ಅದನ್ನು ವ್ಯರ್ಥವಾಗಿ ಹಾಳು ಮಾಡದೇ ಮನೆಯ ಅಭಿವೃದ್ಧಿಗೆ ಬಳಸುವಂತೆ ಸಲಹೆ ನೀಡಿದರು.
ಸಣಾಪುರ ಗ್ರಾಮದ ಹಮಾಲಿ ಕೆಲಸ ಮಾಡುತ್ತಿದ್ದ ಜಡಿಯಪ್ಪ ಅವರು ಎಪಿಎಂಸಿಯಲ್ಲಿ ನೋಂದಾಯಿತ ಹಮಾಲಿ ಕಾರ್ಮಿಕನಾಗಿದ್ದು, ಎಪಿಎಂಸಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಅಂತ್ಯಕ್ರಿಯೆಗೆ ತಾತ್ಮಕಾಲಿಕ ಪರಿಹಾರ 25ಸಾವಿರ ರೂಗಳನ್ನು ನೀಡುತ್ತಿದೆ. ಮತ್ತು ಅವರ ಕುಟುಂಬಕ್ಕೆ 5 ಲಕ್ಷ ರೂಗಳ ವಿಮಾ ಮೊತ್ತವೂ ಬರುತ್ತದೆ ಎಂದು ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್ ತಿಳಿಸಿದರು.
ಈ ಸಂದರ್ಭದಲ್ಲಿ ಅಕ್ಕಿ ವ್ಯಾಪಾರಸ್ತರ ಒಕ್ಕೂಟದ ಉಪಾಧ್ಯಕ್ಷ ಜಿ.ಕುಮಾರಸ್ವಾಮಿ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಕೆ.ದೊಡ್ಡಬಸವರಾಜ, ಪುರಸಭೆ ಸದಸ್ಯರಾದ ಸಿ.ಆರ್.ಹನುಮಂತ, ತಾ.ಪಂ.ಮಾಜಿ ಸದಸ್ಯ ಕೋಟೆ ಷಣ್ಮುಖ ಮುಖಂಡರಾದ ಪಿ.ವೀರೇಶಸ್ವಾಮಿ, ಹನುಮಂತಪ್ಪ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!