ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಸೋಮವಾರದಂದು 21 ಜನ ನಾಮಪತ್ರ ಹಿಂಪಡೆದ ಹಿನ್ನಲೆ 8 ಜನ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡರು.
ಸೆ.26ರಂದು ನಡೆಯಲಿರುವ ಸಹಕಾರ ಸಂಘದ ಚುನಾವಣೆಯಲ್ಲಿ 8 ಸ್ಥಾನಗಳ ನಿರ್ದೇಶಕರ ಸ್ಥಾನಗಳಿಗೆ ಒಟ್ಟು 29 ಜನರು ನಾಮಪತ್ರ ಸಲ್ಲಿಸಿದ್ದರು. ಆದರೆ, ಸೋಮವಾರಂದು 8 ಜನ ಅಭ್ಯರ್ಥಿಗಳು ಸಂಘದ ನಿರ್ದೇಶಕರಾಗಿ ಆಯ್ಕೆಯಾದರು.
ವಿ.ಬಿ.ನಾಗರಾಜ(ಎಸ್ ಸಿ ಮೀಸಲು), ಎನ್.ಆಂಜನೇಯಲು(ಎಸ್ ಟಿ ಮೀಸಲು), ಗೌಡ್ರು ಅಂಜಿನಪ್ಪ(ಹಿಂದುಳಿದ ವರ್ಗ-ಎ), ಕೆ.ಭಾಸ್ಕರ್ ರೆಡ್ಡಿ(ಹಿಂದುಳಿದ ವರ್ಗ-ಬಿ), ಅರಳೆ ಮುತ್ತಯ್ಯ, ಹನುಮಂತಪ್ಪ ಕುರುಬರು (ಸಾಮಾನ್ಯ ಮೀಸಲು), ಜಿ.ಅಯ್ಯಮ್ಮ, ಕೆ.ರಾಧಾ (ಮಹಿಳಾ ಮೀಸಲು ಸ್ಥಾನ) ಇವರು ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರರಾಗಿ ಆಯ್ಕೆಯಾಗಿದ್ದಾರೆ. ಮತ್ತು ಕಡೆಮನೆ ನಾಗರಾಜ (ದೇವಸಮುದ್ರ ಪ್ರಾ.ಕೃ.ಪ.ಸ.ಸಂ), ಟಿ.ರಾಮು (ಎಮ್ಮಿಗನೂರು), ಕೆ.ದೊಡ್ಡಬಸಪ್ಪ(ಹಂಪಾದೇವನಹಳ್ಳಿ), ಅಳ್ಳಿ ನಾಗರಾಜ (ಕಂಪ್ಲಿ), ಪಿ.ಚೊಕ್ಕರಾವ್ (ಸಣಾಪುರ) ಇವರು ಸಹಕಾರ ಸಂಘದ ಡೆಲಿಗೇಟ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.
ನಂತರ ರಿಟರ್ನಿಂಗ್ ಅಧಿಕಾರಿ ರಾಮು ಮಾತನಾಡಿ, ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ 29 ಜನ ನಾಮಪತ್ರ ಸಲ್ಲಿಸಿದ್ದರು. ಆದರೆ, ಸೋಮವಾರ 3ಗಂಟೆ ಒಳಗಾಗಿ 21 ಜನ ನಾಮಪತ್ರ ಹಿಂಪಡೆದ ಹಿನ್ನಲೆ ಕಣದಲ್ಲಿ ಉಳಿದ 8 ಜನರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದರು.
ತದ ನಂತರ ನೂತನ ನಿರ್ದೇಶಕರಿಗೆ ಮಾಲಾರ್ಪಣೆಯೊಂದಿಗೆ ಗೌರವ ಸಲ್ಲಿಸಿದರು.

ಸಹಾಯಕ ರಿಟರ್ನಿಂಗ್ ಅಧಿಕಾರಿ ರಮೇಶ, ಮುಖ್ಯಕಾರ್ಯನಿರ್ವಾಹಕ ಕೆ.ವಿರೇಶ, ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಾಮ ನಿರ್ದೇಶಿತ ಸದಸ್ಯ ಬಳ್ಳಾಪುರ ಲಿಂಗಪ್ಪ, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯರಾದ ಡಾ.ವಿ.ಎಲ್.ಬಾಬು, ಎನ್.ರಾಮಾಂಜಿನೇಯಲು, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಬಿ.ನಾರಾಯಣಪ್ಪ, ಅಳ್ಳಳ್ಳಿ ವಿರೇಶ, ಕಡೆಮನೆ ಪಂಪಾಪತಿ, ವೆಂಕಟರಾಮರಾಜು, ದೇವೇಂದ್ರಗೌಡ, ಕರೇಕಲ್ ಮನೋಹರ, ಹೊನ್ನೂರಸಾಬ್, ಶಿವುಕುಮಾರ, ಜಿ.ಮರೇಗೌಡ, ಹೊಸಕೋಟೆ ಜಗದೀಶ, ತಿಮ್ಮಪ್ಪನಾಯಕ, ಬಳೆ ಮಲ್ಲಿಕಾರ್ಜುನ, ಬಿ.ವಿ.ಗೌಡ, ಕೊಟ್ಟೂರು ರಮೇಶ, ಶರಣ, ಮಂಜುನಾಥ, ಕೆ.ಬಸವರಾಜ, ದೊಡ್ಡಬಸುವ, ಸಹಕಾರ ಸಂಘದ ಸಿಬ್ಬಂದಿಗಳಾದ ಕೆ.ಕರಿಬಸುವ, ಎ.ಸಿದ್ದೇಶ, ಬಿ.ಶ್ರೀನಿವಾಸ, ಮಣಿಕಂಠ, ಉಮೇಶ, ಶರಣಗೌಡ ಸೇರಿದಂತೆ ರೈತ ಮುಖಂಡರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!